Thursday, November 30, 2023
Homeರಾಷ್ಟ್ರೀಯಜಾರ್ಖಂಡ್ ಕಾಂಗ್ರೆಸ್ ನಾಯಕನಿಗೆ ಗುಂಡೇಟು

ಜಾರ್ಖಂಡ್ ಕಾಂಗ್ರೆಸ್ ನಾಯಕನಿಗೆ ಗುಂಡೇಟು

ಹಜಾರಿಬಾಗ್, ನ.4 (ಪಿಟಿಐ) ಜಮೀನು ವಿವಾದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರೊಬ್ಬರ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿರುವ ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ ಕೊರ್ರಾ ಪ್ರದೇಶದ ಕ್ಯಾನರಿ ಹಿಲ್ ರಸ್ತೆಯಲ್ಲಿ ತಾವು ಖರೀದಿಸಿದ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಲು ಹೋದಾಗ ಈ ಘಟನೆ ನಡೆದಿದೆ. ಭೂ ಮಾಫಿಯಾದ ಕಿಂಗ್‍ಪಿನ್ ಅಶೋಕ್ ಸಾವೊ ನೇತೃತ್ವದಲ್ಲಿ ದಾಳಿಕೋರರೊಂದಿಗೆ ಅವರು ವಾಗ್ವಾದ ನಡೆಸಿದರು, ನಂತರ ಅವರು ಅವರ ಮೇಲೆ ಗುಂಡು ಹಾರಿಸಿದರು ಎಂದು ಡಿಎಸ್ಪಿ (ಹೆಡ್ ಕ್ವಾರ್ಟರ್ಸï) ರಾಜೀವ್ ಕುಮಾರ್ ಹೇಳಿದ್ದಾರೆ.

ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ

ಪ್ರಕಾಶ್ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಕಾರಿ ತಿಳಿಸಿದ್ದಾರೆ. ಪೊಲೀಸರು ಸಾವೊನನ್ನು ಬಂಧಿಸಿದ್ದಾರೆ, ಆದರೆ ಅವನ ಐವರು ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಐಪಿಸಿಯ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗಿದೆ.

RELATED ARTICLES

Latest News