ಜಾರ್ಖಂಡ್‍ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಧ್ಯವರ್ತಿ ಪ್ರೇಮ್ ಪ್ರಕಾಶ್ ಬಂಧನ

Social Share

ರಾಂಚಿ, ಅ 25 – ಜಾರ್ಖಂಡ್‍ನಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಪ್ರೇಮ್ ಪ್ರಕಾಶ್ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯ (ಪಿಎಂಎಲïಎ) ಕ್ರಿಮಿನಲ್ ಸೆಕ್ಷನ್‍ ಅಡಿಯಲ್ಲಿ ಪ್ರೇಮ್ ಪ್ರಕಾಶ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಕಸ್ಟಡಿಗೆ ಪಡೆಯಲು ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಈಗ ಮೂರನೇ ಆರೋಪಿ ಬಂಧನವಾಗಿದೆ. ಇದಕ್ಕೂ ಮುನ್ನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ರಾಜಕೀಯ ಸಹಾಯಕ ಪಂಕಜ್ ಮಿಶ್ರಾ ಮತ್ತು ಅವರ ಸಹವರ್ತಿ ಬಚ್ಚು ಯಾದವ್ ಅವರನ್ನು ಇಡಿ ಬಂಧಿಸಿತ್ತು.

ಜಾರ್ಖಂಡ್, ಬಿಹಾರ, ತಮಿಳುನಾಡು ,ನವದೆಹಲಿ ಇತರ ಕೆಲವು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವಿಶೇಷವೆಂದರೆ ರಾಂಚಿಯಲ್ಲಿನ ಪ್ರಕಾಶ್‍ಗೆ ಸಂಬಂಧಿಸಿದ ಮನೆಯಿಂದ ಎರಡು ಎಕೆ -47 ರೈಫಲ್‍ಗಳು ಮತ್ತು 60 ಬುಲೆಟ್‍ಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಶಸ್ತ್ರಾಸ್ತ್ರಗಳು ಇಬ್ಬರು ಜಾರ್ಖಂಡ್ ಪೊಲೀಸ್ ಕಾನ್ಸ್‍ಟೇಬಲ್ ಗಳಿಗೆ ಸೇರಿದ್ದು ಎಂದು ತನಿಖೆಯಿಂದ ಗೊತ್ತಾಗಿದೆ ಇಡಿ ವಶಪಡಿಸಿಕೊಂಡ ನಂತರ ಅವರನ್ನು ಅಮಾನತುಗೊಳಿಸಲಾಗಿದೆ.

Articles You Might Like

Share This Article