Sunday, May 5, 2024
Homeಬೆಂಗಳೂರುಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿ ಅಮಿಷ ಹಣ ಪಡೆದು ವಂಚಿಸಿದ್ದ ಆರೋಪಿ ಬಂಧನ

ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿ ಅಮಿಷ ಹಣ ಪಡೆದು ವಂಚಿಸಿದ್ದ ಆರೋಪಿ ಬಂಧನ

ಬೆಂಗಳೂರು,ಅ.11- ಬಿಬಿಎಂಪಿಯಲ್ಲಿ ನೌಕರಿ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬಿಬಿಎಂಪಿ ಹೆಸರಿನಲ್ಲಿರುವ ನೇಮಕಾತಿ ಆದೇಶದ ಪ್ರತಿ, ಗುರುತಿನ ಚೀಟಿ, ಪೋನ್‍ಪೇ ಮೂಲಕ ಹಣ ಪಡೆದಿರುವ ಬಗ್ಗೆ ಸ್ಕ್ರೀನ್‍ಶಾಟ್ ಪ್ರತಿಗಳು, ಪ್ಯಾನ್ ಕಾರ್ಡ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿಬಿಎಂಪಿಯಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಉದ್ಯೋಗಾಕಾಂಕ್ಷಿಗಳನ್ನು ಆರೋಪಿ ನಂಬಿಸಿದ್ದಾನೆ. ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್ ನೌಕರಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಮೂರು ಸಾವಿರ ಹಣ ನೀಡಿದರೆ ನೇಮಕಾತಿ ಮಾಡಿಸಿಕೊಡುವುದಾಗಿ ನಂಬಿಸಿದ್ದಾನೆ. ಈತನ ಮಾತನ್ನು ನಂಬಿ ಸುಮಾರು 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ತಲಾ ಮೂರು ಸಾವಿರ ಹಣವನ್ನು ಪೋನ್‍ಪೇ ಮೂಲಕ ಪಡೆದುಕೊಂಡಿದ್ದಾನೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ನಕಲಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ ಅವುಗಳನ್ನೇ ನೈಜವಾದವುಗಳೆಂದು ನಂಬಿಸಿ, ವಾಟ್ಸಾಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿದ್ದನು. ಈ ಬಗ್ಗೆ ಅನುಮಾನಗೊಂಡು ಸಂದೀಪ್ ಎನ್ನುವವರು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡು ಒಬ್ಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ ವಿವಿಧ ಆದೇಶದ ಪ್ರತಿ, ಗುರುತಿನ ಚೀಟಿ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

RELATED ARTICLES

Latest News