Monday, December 2, 2024
Homeಉದ್ಯೋಗ | Job newsಬೆಂಗಳೂರಿನಲ್ಲಿ ಅ.20 ರಂದು ಬೃಹತ್ ಉದ್ಯೋಗ ಮೇಳ

ಬೆಂಗಳೂರಿನಲ್ಲಿ ಅ.20 ರಂದು ಬೃಹತ್ ಉದ್ಯೋಗ ಮೇಳ

job fair in Bangalore on 20th

ಚಿಕ್ಕಬಳ್ಳಾಪುರ,ಅ.14- ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸಹಕಾರದೊಂದಿಗೆ ಅ. 20 ರಂದು ಬೆ. 9 ಗಂಟೆಗೆ ಬೆಂಗಳೂರಿನ ರಾಜಾಜಿನಗರದಲ್ಲಿರುವ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹಾಜರಾಗುವಾಗ 6 ಸೆಟ್ ಬಯೋಡಾಟ, ಅಂಕಪಟ್ಟಿ, ಆಧಾರ್ ಕಾರ್ಡ್, ವೋಟರ್ ಐಡಿ ದಾಖಲೆಗಳನ್ನು ತರುವುದು ಕಡ್ಡಾಯವಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು https://jobfair.calicut.nielit.in ನಲ್ಲಿ ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News