Sunday, April 28, 2024
Homeಬೆಂಗಳೂರುಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ : ಇಬ್ಬರ ಬಂಧನ

ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ : ಇಬ್ಬರ ಬಂಧನ

ಬೆಂಗಳೂರು, ಫೆ.6- ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಸಬ್ಸಿಡಿ ದರದಲ್ಲಿ ಲೋನ್, ಸೈಟ್ ಮತ್ತು ವಿಧವೆಯರಿಗೆ ಮಾಸಾಶನ ಮಾಡಿಸಿ ಕೊಡುವುದಾಗಿ ಹೇಳಿ 15 ಲಕ್ಷಕ್ಕೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು 60ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದ ಇಬ್ಬರನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶ್ರೀನಗರದ ಕಾಳಿದಾಸ ಲೇಔಟ್ ನಿವಾಸಿ ದೀಪಕ್ ಅಲಿಯಾಸ್ ಕಿರಣ್ (22) ಮತ್ತು ವಿದ್ಯಾರಣ್ಯಪುರದ ಕಾವೇರಿ ಬಡಾವಣೆ ನಿವಾಸಿ ಹರ್ಷ ಅಲಿಯಾಸ್ ಜಗದೀಶ್ (21) ಬಂ„ತ ಆರೋಪಿಗಳು. ಈ ಪ್ರಕರಣದಲ್ಲಿ ಭಾವನಾ, ಭವಾನಿ ಮತ್ತು ಸಂಜಯ್ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳಾದ ಹರ್ಷ ಮತ್ತು ದೀಪಕ್ ಹತ್ತನೇ ತರಗತಿ ವ್ಯಾಸಂಗ ಮಾಡಿದ್ದು ಮೋಜಿನ ಜೀವನ ನಡೆಸಲು ಈ ರೀತಿಯ ವಂಚನೆ ಎಸಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

ಕಳೆದ ಅ.31ರಂದು ವ್ಯಕ್ತಿಯೊಬ್ಬರ ಮೊಬೈಲ್‍ಗೆ ಕರೆ ಮಾಡಿದ ಅಪರಿಚಿತ ನಿಮಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಕೊಡಿಸುವುದಾಗಿ ಹೇಳಿ 8 ಸಾವಿರ ಹಣವನ್ನು ಆನ್‍ಲೈನ್‍ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಯಾವುದೇ ರೀತಿಯ ಕೆಲಸ ಕೊಡಿಸದೇ ಮೋಸ ಮಾಡಿದ್ದನು. ಈ ಬಗ್ಗೆ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ವಂಚಕರ ಬಗ್ಗೆ ಮಾಹಿತಿ ಕಲೆ ಹಾಕಿ ಇಬ್ಬರನ್ನು ಬಂಧಿಸಿ ಎರಡು ಮೊಬೈಲ್‍ಗಳು ಹಾಗೂ ಎರಡು ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ

ಈ ಇಬ್ಬರು ಆರೋಪಿಗಳು ವಿಧವೆಯರು ಹಾಗೂ ಗೃಹಿಣಿಯರನ್ನು ಗುರಿಯಾಗಿಸಿಕೊಂಡು ಅವರುಗಳ ಮೊಬೈಲ್‍ಗೆ ಕರೆ ಮಾಡಿ ವಿಧವಾ ವೇತನ, ಯುವಕರಿಗೆ ಬಿಬಿಎಂಪಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ, ಸಬ್ಸಿಡಿ ದರದಲ್ಲಿ ಕಾರು, ಸೈಟ್ ಕೊಡಿಸುತ್ತೇವೆಂದು ನಂಬಿಸಿದ್ದಾರೆ. ತದನಂತರದಲ್ಲಿ ಅವರುಗಳಿಂದ ಹಣ ವರ್ಗಾವಣೆ ಮಾಡಿಸಿಕೊಂಡು ಮೋಜಿನ ಜೀವನ ನಡೆಸುತ್ತಿದ್ದುದು ವಿಚಾರಣೆಯಿಂದ ತಿಳಿದು ಬಂದಿದೆ.

ಆರೋಪಿಗಳು ಸುಮಾರು 60ಕ್ಕೂ ಹೆಚ್ಚು ಜನರಿಗೆ ವಂಚಿಸಿ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣವನ್ನು ಮೋಸ ಮಾಡಿ ವರ್ಗಾಯಿಸಿಕೊಂಡಿರುವುದು ತನಿಖೆಯಿಂದ ತಿಳಿದು ಬಂದಿದೆ. ಆದರೆ ಈ ಬಗ್ಗೆ ಸಾರ್ವಜನಿಕರು ಯಾರೂ ದೂರು ನೀಡಿರುವುದಿಲ್ಲ. ಈ ರೀತಿಯ ಆಮಿಷಕ್ಕೊಳಗಾಗಿ ಹಣ ಕಳೆದುಕೊಂಡಿದ್ದಲ್ಲಿ ಕೂಡಲೇ ದೂರು ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಉತ್ತರ ವಿಭಾಗದ ಉಪ ಪೊಲೀಸ್ ಆಯಕ್ತರಾದ ಸೈದುಲ್ಲು ಅದಾವತ್ ಮಾರ್ಗದರ್ಶನದಲ್ಲಿ ಯಶವಂತಪುರ ಉಪ ವಿಭಾಗದ ಎಸಿಪಿ ಮೇರಿ ಶೈಲಜಾ, ಇನ್ಸ್‍ಪೆಕ್ಟರ್ ಶಿವರತ್ನ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂ„ಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

Latest News