ಲೋಕಾಯುಕ್ತಕ್ಕೆ ಶಾಸಕರ ಆಸ್ತಿ ವಿವರ ಸಲ್ಲಿಸಲು ಜೂ.30ರ ಗಡುವು

ಬೆಂಗಳೂರು,ಏ.2- ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2023-24ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಜೂನ್ 30ರೊಳಗೆ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ. ನಿಗದಿತ ನಮೂನೆಯಲ್ಲಿ ಶಾಸಕರು ಕಳೆದ ಆರ್ಥಿಕ ಸಾಲಿನ ತಮ್ಮ ಮತ್ತು ಕುಟುಂಬದ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ ನೇರವಾಗಿ ಸಲ್ಲಿಸುವಂತೆ ವಿಧಾನಸಭೆ ಕಾಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಸಕರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ನೀಡುವಂತೆ ತಿಳಿಸಿದ್ದಾರೆ. ಲೋಕಾಯುಕ್ತರು … Continue reading ಲೋಕಾಯುಕ್ತಕ್ಕೆ ಶಾಸಕರ ಆಸ್ತಿ ವಿವರ ಸಲ್ಲಿಸಲು ಜೂ.30ರ ಗಡುವು