ಗ್ವಾಲಿಯರ್,ಜ.7– ಮಧ್ಯಪ್ರದೇಶದ ಗ್ವಾಲಿಯರ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಹಾಸ್ಟೆಲ್‌ನಲ್ಲಿ 25 ವರ್ಷದ ವೈದ್ಯೆಯೊಬ್ಬಳ ಮೇಲೆ ಸಹೋದ್ಯೋಗಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಘಟನೆಗೆ ಸಂಭಂಧಿಸಿದಂತೆ 25 ವರ್ಷ ವಯಸ್ಸಿನ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಪರೀಕ್ಷೆಗೆ ಹಾಜರಾಗಬೇಕಿತ್ತು ಹಾಗಾಗಿ ಗಜರರಾಜ ವೈದ್ಯಕೀಯ ಕಾಲೇಜಿನ ಬಾಲಕಿಯರ ಹಾಸ್ಟೆಲ್‌ನಲ್ಲಿ ತಂಗಿದ್ದರು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಜಾಡೋನ್ ತಿಳಿಸಿದ್ದಾರೆ.
ಆರೋಪಿ, ಸಂತ್ರಸ್ತೆಯೊಂದಿಗೆ ಅಧ್ಯಯನ ಮಾಡಿದ ವೈದ್ಯನಾಗಿದ್ದು,ಬಾಲಕರ ಹಳೆಯ ಹಾಸ್ಟೆಲ್‌ಗೆ ಭೇಟಿಯಾಗಲು ಅವಳನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ ನಂತರ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಂತರ ಸಂತ್ರಸ್ತೆ ಇಲ್ಲಿನ ಕಂಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.