Friday, October 11, 2024
Homeಮನರಂಜನೆ'ಜಸ್ಟ್ ಪಾಸ್' ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್

‘ಜಸ್ಟ್ ಪಾಸ್’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್

ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಗಾಂಧಿನಗರದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಈಗ ಮತ್ತೊಂದು ಪ್ರಯೋಗಾತ್ಮಕ ಕಥೆಯುಳ್ಳ ಜಸ್ಟ್ ಪಾಸ್ ಚಿತ್ರವನ್ನು ನಿರ್ದೇಶಿಸಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಒಂದಲ್ಲ ಒಂದು ರೀತಿಯಲ್ಲಿ ಪ್ರಚಾರದಲ್ಲಿ ತೊಡಗಿರುವ ಇವರು ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಟ್ರೈಲರನ್ನು ರಿಲೀಸ್ ಮಾಡಿಸುತ್ತಿದ್ದಾರೆ.

ಇತ್ತೀಚಿಗೆ ಚಿಕ್ಕ ಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕರು ಹಾಗೂ ಪರಿಶ್ರಮ ಅಕಾಡೆಮಿಯ ಸ್ಥಾಪಕರು ಆದ ಪ್ರದೀಪ್ ಈಶ್ವರ್ ಹಾಗೂ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಂದ ಹಾಡೊಂದನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿಸಿದ್ದರು. ರಾಯ್ಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ, ಹಾಗೂ ಶ್ರೀ, ಪ್ರಣತಿ ನಾಯಕ-ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ.

“ಟೈಮಿಗೇ ಟೈಮೇನೇ ದುಶ್ಮನ್” ಎಂಬ ಯುವಕರಿಗೆ ಪ್ರಿಯವಾಗುವ ಈ ಗೀತೆ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಇದೇ ಖುಷಿಯಲ್ಲಿರುವ ತಂಡ ನಾಳೆ ಟ್ರೈಲರ್ ಲಾಂಚ್ ಮಾಡುತ್ತಿದ್ದು ಇವರನ್ನು ಪ್ರೋತ್ಸಾಹಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದಾರೆ.

ಅಯೋಧ್ಯೆಯಲ್ಲಿ 2 ತಿಂಗಳವರೆಗೂ ಭಕ್ತರಿಗೆ ನಿರಂತರ ಊಟದ ವ್ಯವಸ್ಥೆ

ಪ್ರಪಂಚದಲ್ಲಿ ಹೆಚ್ಚು ಅಂಕ ಬಂದವರಿಗೆ ಸಾಕಷ್ಟು ಕಾಲೇಜುಗಳಿದೆ. ಆದರೆ “ಜಸ್ಟ್ ಪಾಸ್” ಆದವರಿಗಾಗಿಯೇ ನಮ್ಮ ಚಿತ್ರದಲ್ಲಿ ಕಾಲೇಜು ತೆರೆಯಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟೀಸರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇಂದು ಈ ಹಾಡನ್ನು ನಾನು ಇಷ್ಟಪಡುವ ಬರಹಗಾರರಾದ ವಿಶ್ವೇಶ್ವರ ಭಟ್ ಹಾಗೂ ಶಾಸಕರಾದ ಪ್ರದೀಪ್ ಈಶ್ವರ್ ಬಿಡುಗಡೆ ಮಾಡಿದ್ದು ಬಹಳ ಖುಷಿಯಾಗಿದೆ.

ಏಕೆಂದರೆ ಪರಿಶ್ರಮ ಅಕಾಡೆಮಿಯ ಮೂಲಕ ಪ್ರದೀಪ್ ಈಶ್ವರ್ ಅವರು ಸಹ ಸಾಕಷ್ಟು ಜಸ್ಟ್ ಪಾಸ್ ಆದ ವಿದ್ಯಾರ್ಥಿಗಳನ್ನು ಫಸ್ಟ್ ಕ್ಲಾಸ್ ಬರುವ ಹಾಗೆ ಮಾಡುತ್ತಿದ್ದಾರೆ. ಅವರು ನಮ್ಮ ಚಿತ್ರದ ಹಾಡನ್ನು ಬಿಡುಗಡೆ ಮಾಡಿದ್ದು ನಿಜಕ್ಕೂ ಹೆಮ್ಮೆ ಎಂದು ತಿಳಿಸಿದ ನಿರ್ದೇಶಕ ಕೆ.ಎಂ.ರಘು, ಪ್ರದೀಪ್ ಈಶ್ವರ್ ತಮ್ಮ “ಪರಿಶ್ರಮ” ಪುಸ್ತಕದಲ್ಲಿ ಬರೆದುಕೊಂಡಿರುವ ಜೀವನದ ಕುರಿತಾದ ನಾಲ್ಕು ಅರ್ಥಗರ್ಭಿತ ಸಾಲುಗಳನ್ನು ವಾಚಿಸಿದರು.

ಪ್ರದೀಪ್ ಈಶ್ವರ್ ಹಾಗೂ ವಿಶ್ವೇಶ್ವರ ಭಟ್ ಅವರು ನಮ್ಮ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಹಾರೈಸಿದ್ದಾರೆ ಅವರಿಗೆ ಹಾಗೂ ನನ್ನ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕೆ.ವಿ.ಶಶಿಧರ್.

ನಮ್ಮ ದೇಶದ ಅತೀ ಹೆಚ್ಚು ಶ್ರೀಮಂತರೆಲ್ಲಾ “ಜಸ್ಟ್ ಪಾಸ್” ಹಾಗೂ ಅದಕ್ಕಿಂತ ಸ್ವಲ್ಪ ಹೆಚ್ಚು ಅಂಕ ಪಡೆದಿರುವವರೆ ಎಂದು ಮಾತನಾಡಿದ ವಿಶ್ವೇಶ್ವರ ಭಟ್ ಅವರು ಚಿತ್ರದ ಹಾಡುಗಳು ತುಂಬಾ ಚೆನ್ನಾಗಿದೆ. ಚಿತ್ರದ ಹೆಸರು “ಜಸ್ಟ್ ಪಾಸ್” ಅಷ್ಟೇ. ಆದರೆ ಗಳಿಕೆಯಲ್ಲಿ “ಫಸ್ಟ್ ಕ್ಲಾಸ್” ಆಗಲಿ ಎಂದು ಹಾರೈಸಿದರು

RELATED ARTICLES

Latest News