Wednesday, January 15, 2025
Homeರಾಜ್ಯಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ

ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ

ಬೆಂಗಳೂರು,ಫೆ.25- ಕರ್ನಾಟಕ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಗೌಪ್ಯತೆ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ಅನಂತರ ಕಡತಗಳಿಗೆ ಸಹಿ ಹಾಕಿ ವಿಪಿನ್ ಚಂದ್ರ ಅಧಿಕಾರ ಸ್ವೀಕರಿಸಿದರು.

ಮನೆ ಬಾಗಿಲಿಗೆ ಇ – ಸ್ಟ್ಯಾಂಪ್ : ಸದ್ಯದಲ್ಲೇ ಸರ್ಕಾರಿ ವೆಬ್‍ಸೈಟ್ ಆರಂಭ

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯಪಾಲರು, ಮುಖ್ಯಮಂತ್ರಿಯಾದಿಯಾಗಿ ಗಣ್ಯರು ನೂತನ ನ್ಯಾಯಮೂರ್ತಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಕಾರ್ಯಕ್ರಮ ನಿರೂಪಿಸಿದರು.

RELATED ARTICLES

Latest News