Friday, November 15, 2024
Homeರಾಷ್ಟ್ರೀಯ | Nationalಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಪ್ರಮಾಣ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಖನ್ನಾ ಪ್ರಮಾಣ

Justice Sanjiv Khanna takes oath as 51st Chief Justice of India

ನವದೆಹಲಿ,ನ.11- ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸುಮಾರು 6 ತಿಂಗಳ ಕಾಲ ಅವರು ಅಧಿಕಾರಾವಧಿ ಹೊಂದಿರುತ್ತಾರೆ.ರಾಷ್ಟ್ರಪತಿ ಭವನದ ದರ್ಬಾರ್‌ಹಾಲ್‌ನಲ್ಲಿ ನಡೆದ ಐತಿಹಾಸಿಕ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಹಲವಾರು ಸಚಿವರು, ಹಾಗೂ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಸುಪ್ರೀಂಕೋರ್ಟ್‌ನ ಹಾಲಿ ಮುಖ್ಯನ್ಯಾಯಮೂರ್ತಿಯಾಗಿದ್ದ ಡಿ.ವೈ.ಚಂದ್ರಚೂಡ್‌ ಭಾನುವಾರ ನಿವೃತ್ತಿಯಾಗಿದ್ದರು.

ಕಳೆದ ತಿಂಗಳು ನ್ಯಾಯಮೂರ್ತಿ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ ನಂತರ ಅಕ್ಟೋಬರ್‌ 24ರಂದು ಕೇಂದ್ರ ಸರ್ಕಾರವು ನ್ಯಾಯಮೂರ್ತಿ ಖನ್ನಾ ಅವರನ್ನು ದೇಶದ ಅತ್ಯುನ್ನತ ನ್ಯಾಯಾಂಗ ಹ್ದುೆಗೆ ನೇಮಕ ಮಾಡಲು ಅನುಮೋದನೆ ನೀಡಿತ್ತು.

ಭಾರತದ ಸಂವಿಧಾನದ 124ನೇ ವಿಧಿಯ ಕಲಂ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ರಾಷ್ಟ್ರಪತಿಯವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರನ್ನು 2024ರ ನವೆಂಬರ್‌ 11ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಅವರು 370ನೇ ವಿಧಿ, ವ್ಯಭಿಚಾರವನ್ನು ಅಪರಾಧ ಮುಕ್ತಗೊಳಿಸುವುದು, ಚುನಾವಣಾ ಬಾಂಡ್‌ ಯೋಜನೆ, ಇವಿಎಂ-ವಿವಿಪ್ಯಾಟ್‌ ಎಣಿಕೆ ಇತ್ಯಾದಿ ಪ್ರಕರಣಗಳ ಐತಿಹಾಸಿಕ ತೀರ್ಪುಗಳ ಭಾಗವಾಗಿದ್ದರು. ಇನ್ನು ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾರೆ ಮತ್ತು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.

ಖನ್ನಾ 2019ರ ಜನವರಿವರೆಗೆ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ, ಅವರು ದೆಹಲಿ ನ್ಯಾಯಾಂಗ ಅಕಾಡೆಮಿ, ದೆಹಲಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ ಮತ್ತು ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರಗಳ ಅಧ್ಯಕ್ಷ / ಉಸ್ತುವಾರಿ ನ್ಯಾಯಾಧೀಶರ ಜವಾಬ್ದಾರಿಗಳನ್ನು ಹೊಂದಿದ್ದರು.

ಮೇ 1960ರಲ್ಲಿ ಜನಿಸಿದ ಅವರು ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌‍ ಲಾ ಸೆಂಟರ್‌ನಿಂದ ಕಾನೂನು ಪದವಿ ಪಡೆದರು. ಅವರು 1983ರಲ್ಲಿ ದೆಹಲಿಯ ರ್ಬಾ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು ಮತ್ತು ಆರಂಭದಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ತೆರಿಗೆ, ಮಧ್ಯಸ್ಥಿಕೆ, ವಾಣಿಜ್ಯ ಕಾನೂನು, ಪರಿಸರ ಕಾನೂನು, ವೈದ್ಯಕೀಯ ನಿರ್ಲಕ್ಷ್ಯ ಕಾನೂನು ಮತ್ತು ಕಂಪನಿ ಕಾನೂನುಗಳ ವಿಷಯದಲ್ಲಿ ವಕೀಲಿಕೆ ಮಾಡಿದರು.

ಅವರು ದೀರ್ಘಾವಧಿಯವರೆಗೆ ಆದಾಯ ತೆರಿಗೆ ಇಲಾಖೆಯ ಹಿರಿಯ ಸ್ಥಾಯಿ ಸಲಹೆಗಾರರಾಗಿದ್ದರು. 2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್‌‍) ನೇಮಕಗೊಂಡರು. ಅವರು ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಮತ್ತು ಅಮಿಕಸ್‌‍ ಕ್ಯೂರಿಯಾಗಿ (ನ್ಯಾಯಾಲಯದ ಸ್ನೇಹಿತ) ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಹಾಜರಾಗಿದ್ದರು ಮತ್ತು ವಾದಿಸಿದ್ದರು.

2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್‌‍) ನೇಮಕಗೊಂಡಿದ್ದ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಮತ್ತು ಅಮಿಕಸ್‌‍ ಕ್ಯೂರಿ ಆಗಿ ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಹಾಜರಾಗಿ, ವಾದಿಸಿದ್ದಾರೆ. ಅವರ ಚಿಕ್ಕಪ್ಪ ಎಚ್‌.ಆರ್‌.ಖನ್ನಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಕರಣಗಳು ಬಾಕಿ ಉಳಿಯುವುದನ್ನು ಕಡಿಮೆ ಮಾಡುವುದು ಹಾಗೂ ನ್ಯಾಯ ನೀಡುವುದನ್ನು ತರಿತಗೊಳಿಸುವುದು ನ್ಯಾ. ಸಂಜೀವ್‌ ಕುಮಾರ್‌ ಅವರ ಆದ್ಯತೆ ಎಂದು ಹೇಳಲಾಗುತ್ತಿದೆ.

RELATED ARTICLES

Latest News