Monday, February 26, 2024
Homeರಾಜ್ಯನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ

ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ

ಬೆಂಗಳೂರು, ಫೆ.6-ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಜೆಡಿಎಸ್ ಸೇರ್ಪಡೆಯಾದರು. ಜೆಪಿಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಂಸದ ಅನಿಲ್ ಲಾಡ್ ಮುಂತಾದ ಮುಖಂಡರು ಮಿರ್ಜಿ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಪಕ್ಷ ಸೇರಿದ ಬೆನ್ನಲ್ಲೇ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ರಾಜ್ಯ ಪದಾಧಿಕಾರಿಗಳ ನೇಮಕ: ಪಕ್ಷದ ಕೋರ್ ಕಮಿಟಿ ತೀರ್ಮಾನದಂತೆ ನೂತನ ಪದಾಧಿಕಾರಿಗಳನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಅಲ್ಕೊಡ್ ಹನುಮಂತಪ್ಪ, ಸಾ.ರಾ.ಮಹೇಶ್, ಶಾಸಕ ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರಿಬೋಳ ಅವರನ್ನು ನೇಮಿಸಿದ್ದಾರೆ. ಹಿರಿಯ ಉಪಾಧ್ಯಕ್ಷರಾಗಿ ಮಾಜಿ ಶಾಸಕರಾದ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನೇಮಕ ಮಾಡಲಾಗಿದೆ.

1 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಪ್ರಕರಣ ದಾಖಲು

ಉಪಾಧ್ಯಕ್ಷರಾಗಿ ಶಾಸಕರಾದ ಕರೆಮ್ಮ ಜಿ.ನಾಯಕ, ಟಿ. ಎ.ಶರವಣ, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಚೌಡರೆಡ್ಡಿ ತೂಪಲ್ಲಿ , ರಾಜಾ ವೆಂಕಟಪ್ಪ ನಾಯಕ ದೊರೆ, ಕೆ.ಬಿ.ಪ್ರಸನ್ನ ಕುಮಾರ್, ಸುನೀತಾ ಚೌಹಾಣ್ ಅವರು ನೇಮಕಗೊಂಡಿದ್ದಾರೆ.

ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ವೆಂಕಟರಾವ್ ನಾಡಗೌಡರು, ಖಜಾoಚಿಯಾಗಿ ಬಿ.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್ ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಾಲರವಿ ಅವರನ್ನು ನೇಮಿಸಲಾಗಿದೆ.

ಕಾರ್ಯದರ್ಶಿಗಳಾಗಿ ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್ ಅವರನ್ನು ನೇಮಿಸಲಾಗಿದೆ.

ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

RELATED ARTICLES

Latest News