Saturday, September 23, 2023
Homeಇದೀಗ ಬಂದ ಸುದ್ದಿಹರಿಪ್ರಸಾದ್ ಅಸಮಾಧಾನವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ : ಸಚಿವ ಮುನಿಯಪ್ಪ

ಹರಿಪ್ರಸಾದ್ ಅಸಮಾಧಾನವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ : ಸಚಿವ ಮುನಿಯಪ್ಪ

- Advertisement -

ಬೆಂಗಳೂರು,ಸೆ.15- ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿರುವ ಬಗ್ಗೆ ಪಕ್ಷದ ಹೈಕಮಾಂಡ್ ನೋಡಿಕೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಪ್ರಸಾದ್ ಅವರು ಹೈಕಮಾಂಡ್ ಮಟ್ಟದಲ್ಲಿ 25 ವರ್ಷಗಳ ಕಾಲ ಇದ್ದವರು. ಅವರಿಗೆ ಹೇಳುವಂತಹ ಪರಿಸ್ಥಿತಿಯಲ್ಲಿ ನಾವಿಲ್ಲ. ಅವರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಅವರು ಪಕ್ಷದಲ್ಲಿ ಶಿಸ್ತಿನ ಸಿಪಾಯಿ ರೀತಿ ಕೆಲಸ ಮಾಡಿದವರು. ಅವರಿಗೆ ಪಕ್ಷ ಮುಖ್ಯ ಎಂದರು.

- Advertisement -

ಬಿಡಿಎ ನಿವೇಶನಕ್ಕೆ ಕಾದಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ

ಇಂದಿನ ಪರಿಸ್ಥಿತಿಗಳಲ್ಲಿ ಜಾತ್ಯತೀತ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿಯನ್ನು ಹದ್ದುಬಸ್ತಿನಲ್ಲಿಡಬೇಕಾದರೆ ಈ ಕೆಲಸವಾಗಬೇಕು. ಕಾಂಗ್ರೆಸ್ ನೇತೃತ್ವದಲ್ಲಿ ಜಾತ್ಯತೀತ ಒಕ್ಕೂಟವನ್ನು ಅಧಿಕಾರಕ್ಕೆ ತರಬೇಕು. ಈ ವಿಷಯವನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಭಾವಿಸಿದ್ದೇನೆ. ಅವರ ವೈಯಕ್ತಿಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ಉಪಮುಖ್ಯಮಂತ್ರಿ ಹುದ್ದೆ ಕೊಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಥಾನಮಾನ ಕೊಡುವುದು ಇದೆ. ದೇಶದ ಅಭಿವೃದ್ಧಿ ಜೊತೆಗೆ ಪಕ್ಷಕ್ಕೂ ಶಕ್ತಿ ಬರುತ್ತಿದೆ. ಸದ್ಯಕ್ಕೆ ನನಗೆ ಸಚಿವ ಸ್ಥಾನದಲ್ಲಿ ತೃಪ್ತಿ ಇತ್ತು.

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ದಲಿತ ಸಿಎಂ ಪ್ರಶ್ನೆಗೆ ಅವರು ಉತ್ತರಿಸಿದರು. ಮಧ್ಯಾಹ್ನದ ಬಿಸಿಯೂಟವನ್ನು ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದು, ಗುಣಮಟ್ಟದ ಆಹಾರ ಕೊಡುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚೆ ಮಾಡಲಾಗಿದೆ ಎಂದರು.

#KHMuniyappa, #BKHariprasad,

- Advertisement -
RELATED ARTICLES
- Advertisment -

Most Popular