ಚುನಾವಣೆಯಲ್ಲಿ ಗೆಲವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

Social Share

ಬೆಂಗಳೂರು, ನ.16- ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ಮಾಡಿದ್ದಾರೆ.

ಸಿದ್ದರಾಮಯ್ಯ ಪ್ರಭಾವಿ ನಾಯಕರು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಅವರ ಮೇಲಿದೆ. ಹೀಗಾಗಿ ಅವರು ಸ್ರ್ಪಧಿಸುವ ಕ್ಷೇತ್ರ ಸುರಕ್ಷಿತವಾಗಿರಬೇಕು ಎಂದು ಮುನಿಯಪ್ಪ ಹೇಳಿದರು.

ಬೆಂಗಳೂರಿನಲ್ಲಿ ಎಲ್ಲ ಅವಿಷ್ಕಾರ ಸಾಧ್ಯ : ಸಿಎಂ ಬೊಮ್ಮಾಯಿ

ಸಿದ್ಧರಾಮಯ್ಯ ಅವರಿಗೆ ಕೋಲಾರದಲ್ಲಿ ರಿಸ್ಕ್ ಇದೆ ಎಂಬುದು ಸರಿಯಲ್ಲ. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿದರೆ ಗೆಲ್ಲುವುದು ಕಷ್ಟವಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಕೆಲವರು ಬಿಜೆಪಿಯ ಪರವಾಗಿ ಕೆಲಸ ಮಾಡಿದ್ದಾರೆ. ಅವರ ಮುಂದಾಳತ್ವದಲ್ಲಿ ಈ ಬಾರಿ ಚುನಾವಣೆಗೆ ಹೋದರೆ ಜನ ಗೊಂದಲಕ್ಕೆ ಒಳಗಾಗುತ್ತಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಐದು ಲಕ್ಷ ಜನ ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ನಿಷ್ಠಾವಂತ ಕಾಂಗ್ರೆಸ್ಗರು ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಅನುಕೂಲವಾಗಲಿದೆ. ಅದನ್ನು ಬಿಟ್ಟು ಬಿಜೆಪಿ ಪರವಾಗಿ ಕೆಲಸ ಮಾಡಿದವರನ್ನು ಮುಂದಿಟ್ಟುಕೊಂಡು ಹೋದರೆ ಜನ ಅಪನಂಬಿಕೆ ಪಡುತ್ತಾರೆ.

MP ಪ್ರತಾಪ್ ಸಿಂಹ ವಿರುದ್ಧ ಸಿಎಂಗೆ MLA ರಾಮದಾಸ್ ದೂರು

ಫಲಿತಾಂಶ ಯಾವ ರೀತಿ ಬೇಕಾದರೂ ಬದಲಾಗಬಹುದು ಎಂದಿದ್ದಾರೆ. ಕಾಂಗ್ರೆಸ್ನಲ್ಲಿ ಒಗ್ಗಟ್ಟಿದೆ. ಸಿದ್ದರಾಮಯ್ಯ ಗೆದ್ದೆ ಗೆಲ್ಲುತ್ತಾರೆ ಎಂಬ ಖಚಿತತೆ ಬಳಿಕ ಪ್ರತಿಪಕ್ಷಗಳು ಅಪಪ್ರಚಾರ ಮಾಡಲಾರಂಭಿಸಿದೆ ಎಂದು ಮುನಿಯಪ್ಪ ದೂರಿದರು.

ಸಿದ್ದರಾಮಯ್ಯನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ರ್ಪಸಲಿದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುನಿಯಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Articles You Might Like

Share This Article