ಜನರ ಪ್ರಾಣ ರಕ್ಷಣೆ ಸರ್ಕಾರದ ಮೊದಲ ಆದ್ಯತೆ : ಸಚಿವ ಕೆ.ಸುಧಾಕರ್

Social Share

ಬೆಂಗಳೂರು,ಜ.19- ಜನರ ಪ್ರಾಣ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಶುಕ್ರವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿಯವರು ಜನಪರವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಪ್ರಾಣ ರಕ್ಷಣೆ ಹಾಗೂ ಜೀವನ ನಿರ್ವಹಣೆಗೆ ತೊಂದರೆಯಾಗದಂತೆ ಜನಪರವಾದ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಪ್ರತಿಯೊಬ್ಬರ ಪ್ರಾಣ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು.
ನಾವು ಜನರಿಗೆ ತೊಂದರೆ ಕೊಟ್ಟು ಲಾಕ್‍ಡೌನ್ ಇಲ್ಲವೇ ಕಫ್ರ್ಯೂ ವಿಸಬೇಕಾದ ಅವಶ್ಯಕತೆ ಇಲ್ಲ. ಆದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಒಂದಿಷ್ಟು ಕಠಿಣ ಕ್ರಮಗಳು ಅನಿವಾರ್ಯ ಎಂದು ಹೇಳಿದರು.
ಮೊದಲನೆಯದಾಗಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರ ಜೀವವನ್ನು ಉಳಿಸುವುದು, ಜನರ ಜೀವನಕ್ಕೆ ಕುಂದುಕೊರತೆಗಳು ಆಗದಂತೆ ನೋಡಿಕೊಳ್ಳುವುದು, ಎರಡನೆಯದಾಗಿ ಸರ್ಕಾರದ ನಿರ್ಧಾರಗಳಿಂದ ಜನರ ಜೀವನಕ್ಕೆ ಸಮಸ್ಯೆಯಾಗಬಾರದು. ಹೀಗಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜನರಿಗೆ ತೊಂದರೆಯಾಗುವ ರೀತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಸೋಂಕು ಹಬ್ಬುತ್ತದೆ ಎಂಬುದನ್ನು ತಜ್ಞರು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ನೀಡುತ್ತಿದ್ದಾರೆ. ಅದನ್ನು ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ. ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಇನ್ನು ಎರಡು ಮೂರು ದಿವಸಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸೋಂಕಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಶುಕ್ರವಾರ ಬೆಳಗ್ಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅದರಲ್ಲಿ ಎಲ್ಲ ವರ್ಗದ ಜನರು, ತಜ್ಞರು, ತಾಂತ್ರಿಕ ಸಮಿತಿ ಸಲಹೆಗಾರರು ಎಲ್ಲರೂ ನೀಡಿದ ಅಭಿಪ್ರಾಯಗಳು, ಸಲಹೆಗಳನ್ನು ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕೊರೋನಾ ಕಫ್ರ್ಯೂ, ನಿರ್ಬಂಧಗಳ ಬಗ್ಗೆ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನಿಡಲಿದೆ. ಶುಕ್ರವಾರ ರಾತ್ರಿಯಿಂದ ಸರ್ಕಾರದ ನಿರ್ಧಾರ ಹೊರಬೀಳಲಿದೆ ಎಂದ ಅವರು, ಯಾವುದೇ ನಿರ್ಧಾರ ತೆಗೆದುಕೊಂಡರೂ ಅಂತಿಮವಾಗಿ ದೈನಂದಿನ ಸೋಂಕಿನ ಪ್ರಕರಣ ಹಾಗೂ ಪಾಸಿವಿಟಿ ದರದ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತದೆ ಎಂದರು.
60 ವರ್ಷ ಮೇಲ್ಪಟ್ಟವರಿಗೆ ತಕ್ಷಣವೇ ಬೂಸ್ಟರ್ ಲಸಿಕೆಯನ್ನು ಪಡೆಯಬೇಕು. ರಾಜ್ಯದಲ್ಲಿ ಈವರೆಗೂ ಶೇ.63ರಷ್ಟು ಮಾತ್ರ ಲಸಿಕೆಯನ್ನು ನೀಡಲಾಗಿದೆ. ಇನ್ನು 37ರಷ್ಟು ಬಾಕಿಯಿದ್ದು, ಅರ್ಹರು ನಿಗದಿತ ಕೇಂದ್ರಗಳಲ್ಲಿ ಸ್ವಯಂಪ್ರೇರಿತರಾಗಿ ಬಂದು ಲಸಿಕೆಯನ್ನು ಪಡೆಯಿರಿ ಎಂದು ಮನವಿ ಮಾಡಿಕೊಂಡರು.
ಲಸಿಕೆ ತೆಗೆದುಕೊಂಡರೆ ಕೋವಿಡ್ ಸೋಂಕು ಬರುವುದಿಲ್ಲ ಎಂದು ಹೇಳುವುದಿಲ್ಲ. ಆದರೆ ಪ್ರಾಣಹಾನಿ ಮತ್ತು ಇದರ ತೀವ್ರತೆಯನ್ನು ಕಡಿಮೆ ಮಾಡಲು ಇದು ಅನುಕೂಲವಾಗುತ್ತದೆ. ಹಿಂಜರಿಕೆ ಬಿಟ್ಟು ಲಸಿಕೆ ಹಾಕಿಸಿಕೊಳ್ಳಿ ಎಂದು ಸಲಹೆ ಮಾಡಿದರು.
ಕೊರೋನಾ ಲಸಿಕೆ ನೀಡಿದರೆ ಸೋಂಕಿನಿಂದ ಯಾವ ರೀತಿ ಬಚಾವಾಗಬಹುದು, ರೋಗ ಉಲ್ಭಣವಾಗದಂತೆ ತಡೆಯಬಹುದು ಎಂದು ನಮಗೆ ಸ್ಪಷ್ಟವಾಗಿ ಗೊತ್ತಾಗಿದೆ, ಲಸಿಕೆ ಪರಿಣಾಮ ಬೀರುತ್ತಿದೆ. ಹಾಗಾಗಿ ಫಲಾನುಭವಿಗಳೆಲ್ಲರೂ ತಪ್ಪದೆ ಕೊರೋನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳುವುದು ಅತ್ಯಗತ್ಯ. 15 ವರ್ಷಕ್ಕೆ ಮೇಲ್ಪಟ್ಟ ಮಕ್ಕಳೆಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಮತ್ತೊಮ್ಮೆ ಪುನರುಚ್ಛರಿಸಿದರು.
ಕಾನೂನು ಕ್ರಮ: ರಾಜ್ಯದಲ್ಲಿ ಕೋವಿಡ್ ಸೋಂಕು ಪಾಸಿವಿಟಿ ದರ ಹಾಗೂ ಸಾವಿನ ಪ್ರಕರಣ, ಲಸಿಕೆ ಸೇರಿದಂತೆ ಆಯಾ ದಿನದ ಬೆಳವಣಿಗೆಗಳ ಬಗ್ಗೆ ಸರ್ಕಾರ ಸೂಚಿಸಿರುವ ವೈದ್ಯರನ್ನು ಹೊರತುಪಡಿಸಿ ಬೇರೆ ಯಾರೊಬ್ಬರೂ ಅಕೃತವಾಗಿ ಹೇಳಿಕೆ ನೀಡಬಾರದು ಎಂದು ಇದೇ ಸಂದರ್ಭದಲ್ಲಿ ಸುಧಾಕರ್ ಸೂಚಿಸಿದರು.
ಎಲ್ಲ ವೈದ್ಯರು ಹೇಳಿಕೆಗಳನ್ನು ಮಾಧ್ಯಮಗಳ ಮುಂದೆ ಹೇಳುತ್ತಾ ಹೋದರೆ ಸಾರ್ವಜನಿಕರಲ್ಲಿ ಗೊಂದಲ ಮೂಡುತ್ತದೆ. ಕೆಲವು ಜಿಲ್ಲೆಗಳಲ್ಲಿ ಸೋಂಕು ಪ್ರಮಾಣ ಕಡಿಮೆಯಾಗಿದೆ ಎನ್ನುತ್ತಾರೆ. ಇನ್ನು ಕೆಲವರು ಹೆಚ್ಚಾಗಿದೆ ಎನ್ನುತ್ತಾರೆ. ಇದರಿಂದ ಜನತೆ ಆತಂಕಕ್ಕೆ ಒಳಗಾಗುತ್ತಾರೆ ಎಂದರು.
ಜಿಲ್ಲಾ ಕೇಂದ್ರಗಳಲ್ಲಿ ಯಾರು ಹೇಳಿಕೆ ನೀಡಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಅಕೃತವಾಗಿ ಪಟ್ಟಿಯನ್ನು ಸಿದ್ದಪಡಿಸಿ ಆದೇಶ ಹೊರಡಿಸಲಾಗಿದೆ. ಅವರನ್ನು ಹೊರುತುಪಡಿಸಿ ಯಾರೊಬ್ಬರೂ ಮಾಧ್ಯಮಗಳ ಮುಂದೆ ಹೇಳಿಕೆ ಕೊಡಬೇಕಾದ ಅಗತ್ಯವಿಲ್ಲ ಎಂದು ಸೂಚಿಸಿದರು.
ವೈದ್ಯರ ಅಭಿಪ್ರಾಯಕ್ಕೆ ನಮ್ಮ ಗೌರವವಿದೆ. ನಿಮ್ಮ ವಾಕ್ ಸ್ವಾತಂತ್ರ್ಯಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಂದೊಂದು ಹೇಳಿಕೆ ಕೊಟ್ಟರೆ ಆತಂಕದಲ್ಲಿರುವ ಜನರು ಗೊಂದಲಕ್ಕೆ ಸಿಲುಕುತ್ತಾರೆ. ಇದು ಪುನಾರವರ್ತನೆಯಾಗದಂತೆ ನೋಡಿಕೊಳ್ಳಿ ಎಂದು ಸಲಹೆ ಮಾಡಿದರು.
ಒಂದು ವೇಳೆ ಅಕೃತವಲ್ಲದವರು ಯಾರಾದರೂ ಹೇಳಿಕೆ ನೀಡಿದರೆ ಅಂಥವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನುನು ಕ್ರಮ ಜರುಗಿಸಲಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿದರು.

Articles You Might Like

Share This Article