ಬೆಂಗಳೂರು, ಫೆ.6- ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇಂದಿಲ್ಲಿ ಹೇಳಿದರು. ನಾವು ಕಾಡುಗೊಲ್ಲರು ಎಂಬ ಕಾಡುಗೊಲ್ಲರ ಜೀವನಶೈಲಿ ಕುರಿತಾತ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಡುಗೊಲ್ಲ ಬುಡಕಟ್ಟು ಸಮುದಾಯದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮುಖಂಡರು ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ ಎಂದು ಸಚಿವರು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಮಾತನಾಡಿ, ಕಾಡುಗೊಲ್ಲ ಬುಡಕಟ್ಟು ಸಮುದಾಯ ಆರ್ಥಿಕವಾಗಿ ಹಿಂದುಳಿದಿದ್ದು, ಸಮುದಾಯವನ್ನು ಎಸ್‍ಟಿ ಸೇರಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಬುಡಕಟ್ಟು ಜನಾಂಗದಲ್ಲಿ ವಾಸಿಸುವ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು, ಮೂಲಭೂತ ಸಮಸ್ಯೆಗಳನ್ನು ನಿವಾರಿಸಿ ಹಕ್ಕು ಪತ್ರ ನೀಡಬೇಕು ಎಂದು ತಿಳಿಸಿದರು.
ಬುಡಕಟ್ಟು ಜನಾಂಗ ತಮ್ಮದೇ ಅಚರಣೆ, ಸಂಸ್ಕøತಿ, ಸಂಪ್ರಾದಯ ಉಳಿಸಿಕೊಂಡು ಕಾಡಿನ ಅಂಚಿನಲ್ಲಿ ಹಟ್ಟಿಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಾರೆ. ಹಿಂದೂ ಸಂಪ್ರದಾಯದ ಹೊರತಾಗಿ ಬುಡಕಟ್ಟು ಸಂಪ್ರದಾಯ ಪಾಲಿಸಲಾಗುತ್ತಿದೆ. ಕಾಡುಗೊಲ್ಲ ಸಮುದಾಯಕ್ಕೆ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ ಉದ್ಯೋಗದಲ್ಲಿ ಅವಕಾಶ ಸಿಗುವಂತೆ ಮಾಡಲು, ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯದ ಜೀವನ ವಾಸ್ತವ ಚಿತ್ರಣ ತೊರಿಸಲು ಸಾಕ್ಷ್ಯಚಿತ್ರ ಮಾಡಲಾಗಿದೆ ಎಂದು ಹೇಳಿದರು.
ಕರ್ನಾಟಕ ವಿವಿಧ ಜಿಲ್ಲಾಗಳಲ್ಲಿ ಕಾಡುಗೊಲ್ಲ ಸಮುದಾಯದ ಪ್ರಾಬಲ್ಯವಿದೆ. ಚಿತ್ರದುರ್ಗ, ತುಮಕೂರು, ಪಾವಗಡ, ಶಿರಾ, ಕೂಡ್ಲಗಿ, ಕೊರಟಗೆರೆ ಜಿಲ್ಲಾಯಲ್ಲಿ ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಹಿಂದುಳಿದವರು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ರಾಜ್ಯದಲ್ಲಿ 7ಲಕ್ಷ ಜನಸಂಖ್ಯೆ ಇದೆ.
ಸಮುದಾಯದವನ್ನು ಎಸ್‍ಟಿ ಮೀಸಲಾತಿಗೆ ಸೇರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಮಸ್ಯೆಗಳ ಪರಿಹಾರಕ್ಕೆ ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಖ್ಯಾತ ನಿರ್ದೇಶಕ ನಂಜುಂಡೇಗೌಡರು ಹೊರತಂದಿರುವ ಕಾಡುಗೊಲ್ಲ ಸಮುದಾಯದ ಜೀವನ ಶೈಲಿ, ಸಂಪ್ರದಾಯದ ಬಗ್ಗೆ ಬೆಳಕು ಚೆಲ್ಲುವ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಯಿತು. ಸಮಾರಂಭದಲ್ಲಿ ಸಂಘದ ಮುಖಂಡರಾದ ದೊಡ್ಡನಾಗಯ್ಯ ಸೇರಿದಂತೆ ಹಲವು ಪದಾಕಾರಿಗಳು ಉಪಸ್ಥಿತರಿದ್ದರು.
