Monday, December 2, 2024
Homeಜಿಲ್ಲಾ ಸುದ್ದಿಗಳು | District Newsಕಲಬುರಗಿ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ದುರ್ಮರಣ

ಕಲಬುರಗಿ : ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ದುರ್ಮರಣ

Kalaburagi: four people died in a terrible accident

ಕಲಬುರಗಿ,ನ.9- ಕಾರು ಹಾಗೂ ಮಹೀಂದ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಮಲಾಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿಂದು ನಡೆದಿದೆ.

ಮೃತರನ್ನು ಹೈದರಾಬಾದ್‌ ಮೂಲದ ಭಾರ್ಗವ್‌ ಕೃಷ್ಣ(55), ಪತ್ನಿ ಸಂಗೀತ(45) ಹಾಗೂ ಪುತ್ರ ಉತ್ತಮ್‌ ರಾಘವನ್‌(28) ಹಾಗೂ ಕಾರು ಚಾಲಕ ಎಂದು ಗುರುತಿಸಲಾಗಿದೆ.ಇಂದು ಬೆಳಗಿನ ಜಾವ 5 ಗಂಟೆ ಸುಮಾರಿನಲ್ಲಿ ಭಾರ್ಗವ್‌ ಅವರು ಪತ್ನಿ ಹಾಗೂ
ಮಗನ ಜೊತೆ ಕಾರಿನಲ್ಲಿ ಹೈದರಾಬಾದ್‌ನಿಂದ ಗಾಣಗಪುರದ ಶ್ರೀ ದತ್ತಾತ್ರೇಯ ದೇಗುಲಕ್ಕೆ ಹೋಗುತ್ತಿದ್ದರು.

ಕಲಬುರಗಿಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಕ್ರಾಸ್‌‍ ಬಳಿ ಅತಿವೇಗ, ಅಜಾಗರೂಕತೆಯಿಂದ ಮುನ್ನುಗ್ಗಿದ ಮಹೀಂದ್ರ ಪಿಕಪ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ನಾಲ್ವರೂ ಮೃತಪಟ್ಟಿದ್ದಾರೆ.ಸುದ್ದಿ ತಿಳಿದು ಕಮಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕಾರಿನಿಂದ ನಾಲ್ವರ ಮೃತದೇಹಗಳನ್ನು ಹೊರತೆಗೆದು ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಿದ್ದಾರೆ.


ಅಪಘಾತದಲ್ಲಿ ಮಹೀಂದ್ರ ಪಿಕಪ್‌ ವಾಹನದ ಚಾಲಕ ಸಹ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News