ಕಳಸಾ ಬಂಡೂರಿ ಯೋಜನೆ ಕ್ರೆಡಿಟ್ ಪಡೆಯಲು ಮೂರೂ ಪಕ್ಷಗಳ ವಾರ್

Social Share

ಬೆಂಗಳೂರು,ಡಿ.30-ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನದ ಕ್ರೆಡಿಟ್ ವಾರ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯುತ್ತಿದೆ.ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯೋಜನೆಯನ್ನು ಉದ್ಘಾಟನೆ ಮಾಡಲು ತರಾತುರಿಯಲ್ಲಿ ಸಿದ್ದವಾಗಿರುವುದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ನ ಕಣ್ಣು ಕೆಂಪಾಗುವಂತೆ ಮಾಡಿದೆ.

ಕಳಸಾಬಂಡೂರಿ ಯೋಜನೆ ಅನುಷ್ಠಾನ ಡಬಲ್ ಇಂಜಿನ್ ಸರ್ಕಾರದಿಂದಲೇ ಸಾಧ್ಯವಾಯಿತು ಎಂದು ಬಿಜೆಪಿ ಕಿತ್ತೂರು ತಮ್ತು ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರ ನಡೆಸಿ ವೋಟ್ ಗಿಟ್ಟಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಇದರ ಸುಳಿವು ಅರಿತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿಗೆ ಠಕ್ಕರ್ ಕೊಡಲು ಹಿಂದೆ ಬಿದ್ದಿಲ್ಲ. ನಾವು ಕಾನೂನಿನ ಅಡಿಯಲ್ಲೇ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದೇವೆ. ನಮಗೆ ಎದುರಾಗಿದ್ದ ತೊಡಕುಗಳೆಲ್ಲವೂ ನಿವಾರಣೆಯಾಗಿದೆ. ಶೀಘ್ರದಲ್ಲೇ ಉದ್ಘಾಟನಾ ಕಾರ್ಯಕ್ರಮದ ದಿನಾಂಕವನ್ನು ನೆರವೇರಿಸುತ್ತೇವೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಏನೇ ಹೇಳಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಸರ್ಕಾರದಿಂದ ಈ ಯೋಜನೆ ಉದ್ಘಾಟನೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ ಅನುಮೋದನೆ ನೀಡಿದೆ. ಕರ್ನಾಟಕ ಸರ್ಕಾರದ ಪರಿಷ್ಕøತ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ಸಿಕ್ಕಿರುವುದರಿಂದ ಎಲ್ಲ ಕಾನೂನಿನ ಸಂಕಷ್ಟಗಳು ನಿವಾರಣೆಯಾಗಿದೆ. ನಮಗೆ ಯೋಜನೆ ಅನುಷ್ಠಾನ ಮಾಡಲು ಯಾವುದೇ ಸಮಸ್ಯೆಗಳಿಲ್ಲ ಎಂಬ ವಿಶ್ವಾಸವಿಟ್ಟುಕೊಂಡಿದ್ದಾರೆ.

ಆದರೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತ್ರ ಸರ್ಕಾರದ ಮಾತನ್ನು ಒಪ್ಪುತ್ತಿಲ್ಲ.

ಹೊಸ ವರ್ಷಕ್ಕೆ ಕಿಕ್ಕೇರಿಸಿಕೊಳ್ಳಲು ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್ ವಶ..!

ಎರಡು ವರ್ಷದಿಂದ ಯೋಜನೆ ಅನುಷ್ಠಾನಕ್ಕಾಗಿ ನಿರಂತರ ಹೋರಾಟ ಮಾಡುತ್ತಿದ್ದೆವು. ಇದೇ 31ರಂದು ಬೃಹತ್ ಪ್ರತಿಭಟನೆಯೂ ಇತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು.

ಇದುವರೆಗೂ ಏಕೆ ಸಾಧ್ಯವಾಗಲಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಚುನಾವಣಾ ವರ್ಷ ಸಮೀಪಿಸುತ್ತಿರುವುದರಿಂದ ಜನರನ್ನು ದಿಕ್ಕು ತಪ್ಪಿಸಲು ಸರ್ಕಾರ ಸುಳ್ಳು ಹೇಳುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಗೆ ಮಹಾ ವಂಚನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಸ್ತೃತ ಯೋಜನಾ ವರದಿಗೆ ನಮ್ಮ ಅಧಿಕಾರ ಅವಯಲ್ಲೇ ಅನುಮೋದನೆ ಸಿಕ್ಕಿತ್ತು. ಪರಿಷ್ಕøತ ಡಿಪಿಆರ್ಗೆ ಮಾತ್ರ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ಯಾವ ದಿನಾಂಕ ಎಂಬುದನ್ನು ಸರ್ಕಾರ ಬಹಿರಂಗಪಡಿಸಿಲ್ಲ. ಇದು ಜನರ ಕಿವಿಗೆ ಹೂವಿಡುವ ಬಿಜೆಪಿಯ ಕುತಂತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ವಾಸ್ತವವಾಗಿ ನನ್ನ ಅಧಿಕಾರ ಅವಯಲ್ಲೇ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ ನೆರೆಯ ಗೋವಾ ರಾಜ್ಯ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರಿಂದ ತಡೆಯಾಜ್ಞೆ ಸಿಕ್ಕಿತ್ತು. ಹೀಗಾಗಿ ನಾವು ಯೋಜನೆ ಅನುಷ್ಠಾನ ಮಾಡಲು ಸಾಧ್ಯವಾಗಲಿಲ್ಲ. ಕಡೇ ಪಕ್ಷ ಈಗಲಾದರೂ ಕೇಂದ್ರ ಸರ್ಕಾರ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ನೀಡಿರುವುದು ಸಂತಸದ ಸುದ್ದಿ.

ಇಲ್ಲಿ ಯಾವ ಪಕ್ಷ , ಯಾವ ಸರ್ಕಾರ ಇದೆ ಎಂಬುದು ಮುಖ್ಯವಲ್ಲ. ರಾಜ್ಯದ ಜನತೆಗೆ ಒಳ್ಳೆಯದಾದರೆ ಸಾಕು ಎಂದು ಹೇಳಿದ್ದಾರೆ. ಹೀಗೆ ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ.

Articles You Might Like

Share This Article