“ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಸೀಟು ಮೀಸಲಾತಿಯಲ್ಲಿ ರಾಜಿಯಿಲ್ಲ’

Social Share

ಬೆಂಗಳೂರು,ಮಾ.8- ಕಲ್ಯಾಣ ಕರ್ನಾಟಕ ಭಾಗದ 371(ಜೆ) ಅಡಿಯಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಆದೇಶ ಮಾಡಲಾಗಿದ್ದು ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಶೂನ್ಯವೇಳೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಮತ್ತಿತರರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಸಚಿವರು, ಮೀಸಲಾತಿ ಅನ್ವಯ ದಾಖಲಾತಿಗೆ ಆದೇಶ ಮಾಡಲಾಗಿದ್ದು ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ನವೋದಯ ಮೆಡಿಕಲ್ ಕಾಲೇಜು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದೆ. ಆದರೂ ಆ ಪ್ರವೇಶದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಇಂದು ತಡೆಯಾಜ್ಞೆ ಸಂಬಂಧ ಪ್ರಕರಣ ವಿಚಾರಣೆಗೆ ಬರುತ್ತಿದ್ದ ಸರ್ಕಾರದ ಅಡ್ವೋಕೇಟ್ ಜನರಲ್ಲ ಹಾಜರಾಗುತ್ತಿದ್ದಾರೆ ಎಂಬ ವಿಚಾರ ಸರ್ಕಾರದ ಗಮನಕ್ಕೆ ತಂದರು. ಇದಕ್ಕೂ ಮುನ್ನ ಮಾತನಾಡಿದ ಡಾ.ಶಿವರಾಜ್ ಪಾಟೀಲ, 371(ಜೆ) ಅಡಿಯಲ್ಲಿ ಪ್ರವೇಶ ಸಿಗುತ್ತಿಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಲೋಪದೋಷವಿದ್ದರೆ ಸರಿಪಡಿಸಬೇಕು ಎಂದರು.
ಶಾಸಕ ರಾಜುಗೌಡ ಇದಕ್ಕೆ ದನಿಗೂಡಿಸಿ ನಮಗೆ ಸ್ವಾತಂತ್ರ್ಯ ಸಿಕ್ಕಿದಲ್ಲಿ 1948ರಲ್ಲಿ ಕಲ್ಯಾಣ ಕರ್ನಾಟಕ ಸಮಸ್ಯೆ ಬಗೆಹರಿಸುವುದೇ ಆಗಿದೆ. ಸಮಸ್ಯೆಗಳೇ ಹೆಚ್ಚಾಗುತ್ತಿದೆ. ರಾಯಚೂರಿನಲ್ಲಿ ಕಾಲೇಜು ಸ್ಥಾಪಿಸಿ ಮೀಸಲಾತಿ ಕೊಡುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಸದನ ಸಮಿತಿ ರಚಿಸಿ ಆ ಸಮಿತಿ ನವೋದಯ ಕಾಲೇಜಿಗೆ ಭೇಟಿ ನೀಡಿ ಸರಿಪಡಿಸುವ ಕೆಲಸವಾಗಬೇಕು ಎಂದರು.

Articles You Might Like

Share This Article