Wednesday, June 4, 2025
Homeಮನರಂಜನೆಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಹೈಕೋರ್ಟ್‌ ಮೆಟ್ಟಿಲೇರಿದ ಹಠಮಾರಿ ಕಮಲ್‌

ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆಗೆ ಹೈಕೋರ್ಟ್‌ ಮೆಟ್ಟಿಲೇರಿದ ಹಠಮಾರಿ ಕಮಲ್‌

Kamal Haasan moves Karnataka High Court for release of film

ಬೆಂಗಳೂರು, ಜೂ.2 – ರಾಜ್ಯದಲ್ಲಿ ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿ ನಟ ಕಮಲ್‌ ಹಾಸನ್‌ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕನ್ನಡ ಭಾಷೆ ಬಗ್ಗೆ ಕಮಲ್‌ ಹಾಸನ್‌ ವಿವಾದಕ ಮಾತುಗಳು ಮತ್ತು ನಡೆ ಕರ್ನಾಟಕ ರಾಜ್ಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಈ ನಡುವೆ ಸಾರ್ವಜನಿಕ ಕ್ಷಮೆಯಾಚಿಸದಿದ್ದರೆ ಕರ್ನಾಟಕದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಿರ್ಧರಿಸಿದೆ.

ಕರ್ನಾಟಕದಲ್ಲಿ ಚಲನಚಿತ್ರ ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರನ್ನು ಪ್ರತಿನಿಧಿಸುವ ಪ್ರಭಾವಿ ಸಂಸ್ಥೆಯಾದ ಕೆಎಫ್‌ಸಿಸಿ ಜೂನ್‌ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರವನ್ನು ಬಹಿಷ್ಕರಿಸುವುದಾಗಿ ಘೋಷಿಸಿತು. ನ್ಯಾಯಾಲಯದಲ್ಲಿ ನಾಳೆ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ

RELATED ARTICLES

Latest News