ಚೆನ್ನೈ,ಡಿ.19- ಮಕ್ಕಳ್ ನೀ ಮಯ್ಯಂ ಪಕ್ಷದ ಸಂಸ್ಥಾಪಕ ಹಾಗೂ ಖ್ಯಾತ ಚಿತ್ರ ನಟ ಕಮಲ್ ಹಾಸನ್ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಡಿ.24 ರಂದು ದೆಹಲಿಯಲ್ಲಿ ನಡೆಯಲಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಅವರು ಮಾಡಿಕೊಂಡಿರುವ ಮನವಿಗೆ ಕಮಲ್ ಹಾಸನ್ ಸಾಕರಾತ್ಮಕವಾಗಿ ಸ್ಪಂದಿಸಿರುವುದರಿಂದ ಅವರು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ನನಗೆ ಪತ್ರ ಬರೆದು ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಅವರ ಮನವಿಗೆ ನಾನು ಸ್ಪಂದಿಸಿದ್ದೇನೆ. 24 ರಂದು ದೆಹಲಿಯಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧ..!
ನಾನು ಕಾಂಗ್ರೆಸ್ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿರುವುದರಿಂದ ನಮ್ಮ ಪಕ್ಷದ ಸಿಂಪತಿ ಯಾವ ಪಕ್ಷದ ಕಡೆ ಇದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಸೂಚ್ಯವಾಗಿ ತಿಳಿಸಿರುವುದರಿಂದ ಅವರು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಇಲ್ಲವೆ ಆ ಪಕ್ಷದೊಂದಿಗೆ ಮಕ್ಕಳ್ ನೀ ಮಯ್ಯಂ ಪಕ್ಷವನ್ನು ವೀಲಿನ ಮಾಡುವ ಸಾಧ್ಯತೆಗಳಿವೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
#KamalHaasan, #BharatJodoYatra, #Congress, #RahulGandhi,