ಸೋಂಕು ತಗುಲಿದ ಪೊಲೀಸ್ ಸಿಬ್ಬಂದಿಗೆ ಸೂಕ್ತ ಚಿಕಿತ್ಸೆ: ಕಮಲ್‍ಪಂತ್

Spread the love

ಬೆಂಗಳೂರು, ಏ.22- ತಮ್ಮ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕೊರೊನಾ ಸೋಂಕು ಕಂಡುಬಂದ ತಕ್ಷಣ ಆಸ್ಪತ್ರೆಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಹಿರಿಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇಂದು ಸಭೆ ನಡೆಸಿದ ಆಯುಕ್ತರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಯೋಗಕ್ಷೇಮ ವಿಚಾರಿಸುವುದರ ಜತೆಗೆ ಅವರ ಕುಟುಂಬಗಳಿಗೆ ಧೈರ್ಯ ಹೇಳಿ ಎಂದು ತಿಳಿಸಿದರು.

ನಮ್ಮ ಸಿಬ್ಬಂದಿ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಯಾವುದೇ ಸಂದರ್ಭದಲ್ಲಾದರೂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಯಾವ್ಯಾವ ಆಸ್ಪತ್ರೆಗಳಿವೆ ಎಂಬುದನ್ನು ಗುರುತಿಸಿಕೊಳ್ಳಿ ಎಂದು ಹೇಳಿದರು.

ರಾತ್ರಿ ಕಫ್ರ್ಯೂವನ್ನು ಬಹಳ ಎಚ್ಚರಿಕೆಯಿಂದ ಕಟ್ಟುನಿಟ್ಟಾಗಿ ಮಾಡಬೇಕು. ಅನಗತ್ಯವಾಗಿ ಯಾವುದೇ ರೀತಿಯ ವಾಹನಗಳು ಓಡಾಡದಂತೆ ನೋಡಿಕೊಳ್ಳಬೇಕು. ಶನಿವಾರ ಮತ್ತು ಭಾನುವಾರ ಕಫ್ರ್ಯೂವನ್ನು ಬಹಳ ಜಾಗೃತಿಯಿಂದ ನಿಭಾಯಿಸಬೇಕು. ಯಾವ ಯಾವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ಮಾಡಿಕೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸುವ ಮೂಲಕ ಕೋವಿಡ್ ಸೋಂಕು ತಡೆಗಟ್ಟಬೇಕು ಎಂದರು.

ನಿನ್ನೆ ಆಯುಕ್ತರು ಆಸ್ಪತ್ರೆಗಳ ಮುಖ್ಯಸ್ಥರ ಜತೆ ಸಭೆ ನಡೆಸಿ ಪೊಲೀಸ್ ಸಿಬ್ಬಂದಿ ಹಾಗೂ ಅಕಾರಿಗೆ ಸೋಂಕು ತಗುಲಿದರೆ ಆಸ್ಪತ್ರೆಗೆ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ಕೊಡಬೇಕೆಂದು ಮನವಿ ಮಾಡಿದ್ದಾರೆ.

Facebook Comments