Saturday, July 20, 2024
Homeರಾಷ್ಟ್ರೀಯಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

ಡಾರ್ಜಿಲಿಂಗ್‌,ಜೂ.17- ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿ ಇತರ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್ ಪ್ರೆಸ್‌‍ ರೈಲಿಗೆ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಪ್ಯಾಸೆಂಜರ್‌ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಆ ಸಂದರ್ಭದಲ್ಲಿ ಐದು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ರೈಲ್ವೇ ಅಧಿಕಾರಿಗಳು, ಪೊಲೀಸರು, ವೈದ್ಯರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ದೌಡಾಯಿಸಿದ್ದಾರೆ. ರೈಲು ಅಪಘಾತದಲ್ಲಿ ಸಂತ್ರಸ್ಥರಾಗಿರುವವರ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

RELATED ARTICLES

Latest News