ಬೆಂಗಳೂರು, ಫೆ.9- ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಕೂಡ 3ನೇ ಮಗುವಿನ ನಿರೀಕ್ಷೆಯಲ್ಲಿದ್ದು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಚುಟುಕು ಸರಣಿಯಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.
ನ್ಯೂಜಿಲ್ಯಾಂಡ್ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತೊಡಗಿರುವ ಕೇನ್ ವಿಲಿಯಮ್ಸನ್ ಅವರು ಮೊದಲ ಟೆಸ್ಟ್‍ನ ಎರಡು ಇನ್ನಿಂಗ್ಸ್‍ನಲ್ಲಿ ಶತಕದ ಸಂಭ್ರಮ ಕಂಡಿದ್ದರು. ಅಲ್ಲದೆ ಟೆಸ್ಟ್ ವೃತ್ತಿ ಜೀವನದಲ್ಲಿ 30ನೇ ಶತಕ ಸಿಡಿಸಿ ಆಸ್ಟ್ರೇಲಿಯಾದ ದಿಗ್ಗಜ ಡಾನ್ ಬ್ರಾಡ್ಮನ್ ಹಾಗೂ ಭಾರತದ ವಿರಾಟ್ ಕೊಹ್ಲಿ ಅವರ ಶತಕದ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ್ದರು. ಈ ಪಂದ್ಯದಲ್ಲಿ ಕಿವೀಸ್ 281 ರನ್‍ಗಳ ಗೆಲುವು ಸಾಧಿಸಿತ್ತು. ಎರಡನೇ ಟೆಸ್ಟ್ ಪಂದ್ಯವು ಹ್ಯಾಮಿಲ್ಟನ್‍ನ ಸಡನ್ ಪಾರ್ಕ್‍ನಲ್ಲಿ ನಡೆಯಲಿದೆ.
ಈಶ್ವರಪ್ಪ ಆಟಕ್ಕುಂಟು, ಲೆಕ್ಕಕ್ಕಿಲ್ಲ : ಪ್ರಿಯಾಂಕ್ ಖರ್ಗೆ ಲೇವಡಿ
ದಕ್ಷಿಣ ಆಫ್ರಿಕಾದ ಟೆಸ್ಟ್ ಸರಣಿಯ ನಂತರ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವೆ ಫೆಬ್ರವರಿ 21 ರಿಂದ 3 ಟಿ 20 ಹಾಗೂ 2 ಟೆಸ್ಟ್ ಪಂದ್ಯಗಳು ಆಯೋಜನೆಗೊಂಡಿದ್ದು, ಮೂರನೇ ಮಗುವಿನ ನಿರೀಕ್ಷೆಯ ಲ್ಲಿರುವ ಕೇನ್ ವಿಲಿಯಮ್ಸ್ ಅವರು ವೈಟ್‍ಬಾಲ್ ಸರಣಿಗೆ ಲಭ್ಯರಾಗುವುದಿಲ್ಲ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಎಕ್ಸ್ ಖಾತೆಯಲ್ಲಿ ತಿಳಿಸಿದೆ.