ಪತಿ ಹಾಗೂ ಮಾವನ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಟಿ ಚೈತ್ರಾ

Spread the love

ಮೈಸೂರು, ಮೇ 24-ಬ್ಯಾಂಕ್ ಖಾತೆಯನ್ನು ದುರ್ಬಳಕೆ ಹಾಗೂ ಫೋರ್ಜರಿ ಸಹಿ ಮಾಡಿ ಗೋಲ್ಡ ಲೋನ್ ಪಡೆದಿರುವುದಾಗಿ ಚಿತ್ರನಟಿಯೊಬ್ಬರು ತಮ್ಮ ಪತಿ ಹಾಗೂ ಮಾವನ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿತ್ರನಟಿ ಚೈತ್ರಾಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ದೂರು ನೀಡಿದ್ದಾರೆ.

ಪತಿ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್ ವಿರುದ್ದ ವಂಚನೆ ಆರೋಪದಡಿ ದೂರು ದಾಖಲಾಗಿದೆ. ತನ್ನ ಅನುಮತಿ ಪಡೆಯದೆ ನನ್ನ ಖಾತೆಯನ್ನು ದುರ್ಬಳಕೆ ಮಾಡಿಕೊಂಡು 13 ಲಕ್ಷ ಗೋಲ್ಡ ಲೋನ್ ಪಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜಯಲಕ್ಷ್ಮಿಪುರಂ ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದು, ಇದರಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡಾ ಶಾಮೀಲಾಗಿದ್ದಾರೆಂದು  ದೂರಿನಲ್ಲಿ ಆರೋಪಿಸಲಾಗಿದೆ. ನನಗೆ ವಂಚನೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ಚೈತ್ರಾ ದೂರಿನಲ್ಲಿ ತಿಳಿಸಿದ್ದಾರೆ.

Facebook Comments