Home ಇದೀಗ ಬಂದ ಸುದ್ದಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

0
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ಬೆಂಗಳೂರು,ಅ.23- ಕಾನೂನು ಬಹಿರವಾಗಿ ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಧರಿಸಿಕೊಂಡ ಹಿನ್ನಲೆಯಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ರ್ಪಧಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ರ್ಪಯೊಬ್ಬರನ್ನು ಬಂಸಿರುವ ಪ್ರಕರಣ ಇದಾಗಿದೆ. ಹುಲಿ ಉಗುರಿರುವ ಪೆಂಡೆಂಟ್ ಹಾಕಿಕೊಂಡ ಅವರನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಬಂಧಿಸಲಾಗಿದೆ. ಜಾಮೀನು ರಹಿತ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಲಾಗಿದೆ.

ಹುಲಿ ಉಗುರುಗಳನ್ನು ಹೊಂದುವುದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಉಗುರುಗಳನ್ನು ಮಾರಾಟ ಮಾಡಲು ಅಥವಾ ಖರೀದಿಸುವಂತಿಲ್ಲ. ಬಿಗ್ ಬಾಸ್ ಪ್ರದರ್ಶನದ ವೇಳೆ ಅವರು ಲಾಕೆಟ್ ಧರಿಸಿರುವುದು ಕಂಡುಬಂದಿದೆ. ಇದನ್ನು ಆಧರಿಸಿ ಎಫ್‍ಐಆರ್ ದಾಖಲಾಗಿದ್ದು, ಅರಣ್ಯಾಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.
ತಡರಾತ್ರಿ ಬಿಗ್ ಬಾಸ್ ಮನೆಗೆ ತಲುಪಿದ ಅರಣ್ಯ ಇಲಾಖೆ ಪರೀಕ್ಷೆ ನಡೆಸಲು ಸ್ರ್ಪಧಿಯಿಂದ ಸರಪಳಿಯನ್ನು ಹೊರಗೆ ತರುವಂತೆ ಸೂಚಿಸಿದೆ. ಪರಿಶೀಲನೆ ಬಳಿಕ ಇದು ಅಸಲಿ ಹುಲಿ ಮೊಳೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡಿದ್ದಾರೆ. ನಂತರ ಬಿಗ್ ಬಾಸ್ ಆಯೋಜಕರಿಗೆ ಸ್ರ್ಪಧಿಯನ್ನು ಹಸ್ತಾಂತರಿಸುವಂತೆ ಕೇಳಿಕೊಂಡರು.

ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟ..?

ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಬಂಧಿಸಲಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಷ್ಟಡಿಯಲ್ಲಿದ್ದಾರೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಕುತ್ತಿಗೆಯಲ್ಲಿ ಹುಲಿ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್‍ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್‍ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ವರ್ತೂರು ಸಂತೋಷ್ ಮೂಲತ: ರೈತರಾಗಿದ್ದಾರೆ. ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಜೊತೆಗೆ ಕೈ ಹಾಗೂ ಕತ್ತಿಗೆ ಹಲವಾರು ಚಿನ್ನದ ಆಭರಣಗಳನ್ನು ಹಾಕಿರುತ್ತಾರೆ. ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾದ ಸಂತೋಷ್ ಸದಾ ಒಂದು ಚೈನ್ ಧರಿಸುತ್ತಿದ್ದರು. ಅದರಲ್ಲಿ ಹುಲಿಯ ಉಗುರು ಕಾಣಿಸಿದೆ.

ಈ ಕಾರಣಕ್ಕಾಗಿ ಅವರನ್ನು ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಸಂತೋಷ್ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಹುಲಿ ಉಗುರು ಧರಿಸಿರುವುದು ಸ್ಪಷ್ಟವಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಸ್ಪಷ್ಟಪಡಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಂದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ಸಿಗುವುದಿಲ್ಲ. ಆದರೆ ವರ್ತೂರು ಸಂತೋಷ್ ಅರೆಸ್ಟ್ ಮಾಡಿರುವುದರಿಂದ ಅವರು ಮತ್ತೆ ಬಿಗ್ಬಾಸ್ ಮನೆಗೆ ಬರುತ್ತಾರಾ ಎಂಬ ಪ್ರಶ್ನೆ ಮೂಡಿದೆ.