ಬೆಂಗಳೂರು, ಮಾ.29-ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾ.22ರಿಂದ 25ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಅದಕ್ಕೆ ಹಾಜರಾದವರಿಗೆ ಮಾತ್ರ ಈ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿನಾಯಿತಿ: 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಈ ಪರೀಕ್ಷೆ ಯಿಂದ ವಿನಾಯಿತಿ ಇದೆ. ಅಲ್ಲದೆ, ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.