ನ.1ರಂದು ಮನೆಗಳ ಮೇಲೆ ಕನ್ನಡ ಧ್ವಜ ಹಾರಿಸಲು ಜೆಡಿಎಸ್ ಕರೆ

Social Share

ಬೆಂಗಳೂರು, ಅ.29- ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಮನೆ-ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕರೆ ನೀಡಿದ್ದ ಮಾದರಿಯಲ್ಲೇ ಜೆಡಿಎಸ್ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಕರೆ ನೀಡಿದೆ.

ರಾಜ್ಯದ ಪ್ರತಿ ಮನೆಯ ಮೇಲೂ ಕನ್ನಡದ ಬಾವುಟ ಹಾರಿಸಲು ಕನ್ನಡಿಗರಲ್ಲಿ ಮನವಿ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮುಂಬರುವ ವಿಧಾನ ಸಭೆ ಚುನಾವಣೆಯ ಪಕ್ಷದ ಸಂಭವನೀಯ ಅಭ್ಯರ್ಥಿಯು ಕನ್ನಡ ಬಾವುಟವನ್ನು ಮನೆಯ ಮೇಲೆ ಹಾರಿಸುವ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ಜೆಡಿಎಸ್ ನಿರ್ದೇಶನ ನೀಡಿದೆ.

ಮತ್ತೊಂದು ಮೈಲಿಗಲ್ಲು ಸಾಧಿಸಲು ಇಸ್ರೋ ಸಿದ್ಧತೆ

ಕನ್ನಡ ಬಾವುಟದ ಅಭಿಯಾನದಲ್ಲಿ ಪಕ್ಷದ ಎಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಪಕ್ಷದ ಪದಾಧಿಕಾರಿಗಳು, ಶಾಸಕರು, ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕನ್ನಡ ಬಾವುಟಗಳ ಮೆರವಣಿಗೆ ಹಾಗೂ ವಿತರಣೆಯ ಅಭಿಯಾನವನ್ನು ನಾಳೆಯಿಂದ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ನವೆಂಬರ್ 1ರಂದು ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಂಚರತ್ನ ರಥ ಯಾತ್ರೆಗೆ ಚಾಲನೆ ನೀಡುವ ಮುನ್ನ ಸಾಮಾನ್ಯ ಕಾರ್ಯಕರ್ತರೊಬ್ಬರ ಮನೆಯ ಮೇಲೆ ಕನ್ನಡ ಬಾವುಟ ಕಟ್ಟುವ ಮೂಲಕ ಗೌರವ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಆ ಕ್ಷೇತ್ರದ ಜೆಡಿಎಸ್‍ನ ಸಂಭವನೀಯ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಹಾಗೂ ಆ ಮನೆಯ ಕುಟುಂಬದ ಸದಸ್ಯರು ಮಾತ್ರ ಇರುತ್ತಾರೆ. ಕನ್ನಡ ಬಾವುಟ ಅಭಿಯಾನವನ್ನು ನವೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಮಾಜಿ ಸಿಎಂ ಸೇರಿ ಮಹಾರಾಷ್ಟ್ರ ರಾಜಕೀಯ ಮುಖಂಡರ Z+ ಭದ್ರತೆ ಕಡಿತ

ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ವತಿಯಿಂದ ನಾಳೆ ಕನ್ನಡ ಬಾವುಟದ ಮೆರವಣಿಗೆ ಹಾಗೂ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯಿಂದ ನಾಳೆ ರಾತ್ರಿ 8 ಗಂಟೆಯವರೆಗೂ ಮೆರವಣಿಗೆ ಮೂಲಕ ಕನ್ನಡ ಬಾವುಟ ವಿತರಣೆ ಕಾರ್ಯಕ್ರಮವನ್ನು ಗೋವಿಂದ ರಾಜ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್. ಪ್ರಕಾಶ್ ತಿಳಿಸಿದ್ದಾರೆ.

ರಾಜಾಜೀನಗರದ 6ನೇ ಬ್ಲಾಕ್‍ನಲ್ಲಿರುವ ಗಣಪತಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭಿಸಿ ಮಾಗಡಿ ರಸ್ತೆಯ ಟೋಲ್‍ಗೇಟ್, ಕಾವೇರಿ ಪುರ, ಮೂಡಲಪಾಳ್ಯ ಹಾಗೂ ನಾಯಂಡಳ್ಳಿ ಜೆಂಕ್ಷನ್ ವರೆಗೆ ನಡೆಸಿ ಕನ್ನಡ ಬಾವುಟ ವಿತರಿಸಲಾಗುವುದು.

ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಎ. ತಿಪ್ಪೇಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮತ್ತಿತರರ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Articles You Might Like

Share This Article