ಕನ್ನಡ ಧ್ವಜ ಹಾರಿಸಿದ ವಿದ್ಯಾರ್ಥಿಗೆ ಮರಾಠಿ ಪುಂಡರಿಂದ ಹಲ್ಲೆ

Social Share

ಬೆಳಗಾವಿ,ಡಿ.2- ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವು ದುಷ್ಕರ್ಮಿಗಳು ಥಳಿಸಿರುವ ಘಟನೆ ಟಿಳಕವಾಡಿಯ ಕಾಲೇಜೊಂದರಲ್ಲಿ ನಡೆದಿದ್ದು, ಭಾಷಾ ವಿವಾದವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ನಗರದ ಟೀಲಕವಾಡಿ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಸುದ್ದಿ ತಿಳಿದ ಡಿಸಿಪಿ ರವೀಂದ್ರ ಗಡಾದಿ ಮತ್ತು ಇತರ ಅಕಾರಿಗಳು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ. ಆದರೆ ಯಾವುದೇ ವಿದ್ಯಾರ್ಥಿಗಳು ಈ ಕುರಿತು ದೂರು ನೀಡಲು ಮುಂದಾಗಿಲ್ಲ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ರೌಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ : ಬೊಮ್ಮಾಯಿ

ಕಾಲೇಜಿನ ಕಾರ್ಯಕ್ರಮದಲ್ಲಿ ಕನ್ನಡ ಹಾಡಿಗೆ ಕನ್ನಡ ಧ್ವಜ ಹಿಡಿದು ವಿದ್ಯಾರ್ಥಿ ನೃತ್ಯ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಇನ್ನೋರ್ವ ವಿದ್ಯಾರ್ಥಿ ಡಾನ್ಸ್ ಮಾಡಿದ ವಿದ್ಯಾರ್ಥಿಯನ್ನು ಥಳಿಸಿದ್ದಾನೆ ಎಂಬ ಮಾಹಿತಿ ದೊರೆಯಿತು. ಹಾಗಾಗಿ ಎಲ್ಲ ವಿದ್ಯಾರ್ಥಿಗಳನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಕೆಲವರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಮುಂದಾಗಿದ್ದೇವೆ ಅವರು ತಿಳಿಸಿದ್ದಾರೆ.

20-25 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಇಂತಹ ಘಟನೆ ಈಗ ಮತ್ತೆ ಮರುಕಳಿಸಿದ್ದು ಆತಂಕಕ್ಕೆ ಕಾರಣವಾಗಿದೆ.

ರ‍್ಯಾಗಿಂಗ್ ಮಾಡಿದ ಸರ್ಕಾರಿ ವೈದ್ಯಕೀಯ ಕಾಲೇಜಿನ 6 ವಿದ್ಯಾರ್ಥಿಗಳ ಅಮಾನತು

ಕನ್ನಡಪರ ಸಂಘಟನೆಗಳ ಆಕ್ರೋಶ: ಟಿಳಕವಾಡಿ ಪೊಲೀಸರು ಕನ್ನಡಿಗ ವಿದ್ಯಾರ್ಥಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಮನಬಂದಂತೆ ಥಳಿಸಿದ್ದಾರೆ. ಇದಕ್ಕೆ ಕೆಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕನ್ನಡ ಧ್ವಜ ಹಿಡಿದು ಡ್ಯಾನ್ಸ್ ಮಾಡಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದ ಘಟನೆ ನಂತರ, ಬಾವುಟ ಹಿಡಿದ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಿದ್ದ ಬೆಳಗಾವಿ ನಗರ ಡಿಸಿಪಿ ಕಪಾಳಕ್ಕೆ ಹೊಡೆದಿದ್ದು ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ ಆರೋಪಿಸಿದ್ದಾನೆ.

ಏರ್ ಇಂಡಿಯಾ ದೇಶೀಯ ವಿಮಾನ ಕಾರ್ಯಾಚರಣೆಗಳಲ್ಲಿ ಬದಲಾವಣೆ

ಹಲ್ಲೆಗೆ ಒಳಗಾದ ಯುವಕರಿಗೆ ರಕ್ಷಣೆ ನೀಡಬೇಕಿದ್ದ ಪೊಲೀಸರೇ ಯುವಕರ ಮೇಲೆ ದರ್ಪ ತೋರಿರುವುದು ಸರಿಯೇ? ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಯ ಸದಸ್ಯರು ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ನಡೆಯನ್ನು ಖಂಡಿಸಿದ್ದಾರೆ.

Kannada, flag, student, attacked, Belagavi,

Articles You Might Like

Share This Article