ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ

Social Share

ಬೆಂಗಳೂರು,ಮಾ.4- ಕನ್ನಡ ನಾಡು, ಸಂಸ್ಕøತಿ ಬಿಂಬಿಸಲು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ಆಯೋಜಿಸಲು 20 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಣಕಾಸು ಸಚಿವರೂ ಆದ ಸಿಎಂ ಬೊಮ್ಮಾಯಿ ವರು ಇಂದು ಮಂಡಿಸಿದ ಆಯವ್ಯಯದಲ್ಲಿ ಈ ವಿಷಯ ಪ್ರಸ್ತಾಪಿಸಿ ಹಾವೇರಿಯ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.
( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ )
ಕರ್ನಾಟಕ ಕಲಾ ಗ್ರಾಮವನ್ನು ಪೂರ್ಣಪ್ರಮಾಣದಲ್ಲಿ ಸಾಂಸ್ಕøತಿಕವಾಗಿ ಸಜ್ಜುಗೊಳಿಸಿ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸಲು ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಯಕ್ಷಗಾನ ಕಲೆಯ ಸಮಗ್ರ ಆಯಾಮಗಳ ಕುರಿತು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿದೆ.
ಸಮಾಜ ಸುಧಾರಕರಾದ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿಯನ್ನು ಪ್ರತಿ ವರ್ಷ ಮಾ.27ರಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.
ನಶಿಸಿ ಹೋಗುತ್ತಿರುವ ತಳ ಸಮುದಾಯದಲ್ಲಿರುವ ವಿಶಿಷ್ಟ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಾಂಸ್ಕøತಿಕ ಶಿಬಿರ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಡಾ. ಮಹಾದೇವ ಬಣಕಾರ ಸಾಂಸ್ಕøತಿಕ ಭವನ ನಿರ್ಮಾಣ, ಸಾಹಿತಿಗಳಾದ ಡಾ. ಸಿದ್ಧಲಿಂಗಯ್ಯ, ಚಿಮೂ, ಚಂಪಾ, ಕಣವಿ ಅವರ ಅಮೂಲ್ಯ ಸಾಹಿತ್ಯಗಳನ್ನು ಉಳಿಸಲು ವಿಶೇಷ ಯೋಜನೆ ಮಂಗಳೂರು ವಿವಿಯಲ್ಲಿ ಅರೆ ಭಾಷಾ ಸಂಶೋಧನಾ ಕೇಂದ್ರಗಳನ್ನು, ಗೋವಾದಲ್ಲಿ ಕನ್ನಡ ಭವನ ನಿರ್ಮಾಣ, ಕಾಸರಗೋಡಿನಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರಿನಲ್ಲಿ, ಜಯದೇವಿ ತಾಯಿ ಲಿಗಾಡೆ ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಲಾಗುವುದು.

Articles You Might Like

Share This Article