Thursday, May 2, 2024
Homeರಾಜ್ಯಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್

ಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್

ಬೆಂಗಳೂರು,ಫೆ.27- ಮುಂದಿನ ತಿಂಗಳ ಆರಂಭದ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರದಿದ್ದರೆ ಅಂತಹ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದಾಗುವುದರ ಜೊತೆಗೆ ಭಾರಿ ಪ್ರಮಾಣದ ದಂಡ ಪಾವತಿಸಬೇಕಾಗುತ್ತದೆ. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಆದರೂ ಇನ್ನು ನೂರಾರು ಮಂದಿ ಕನ್ನಡ ಅನುಷ್ಠಾನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಅಧಿಕಾರಿಗಳು ಕನ್ನಡ ಭಾಷಾ ಫಲಕ ಅಳವಡಿಕೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಳಗಿನ ಜಾವ ಕಸ ಸಂಗ್ರಹಿಸಲು ಮನೆ ಬಾಗಿಲಿಗೆ ಬರುವ ಕಸದ ಗಾಡಿಗಳ ಮೂಲಕ ಕನ್ನಡ ನಾಮಫಲಕ ಬಳಕೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿಯ ಆರೋಗ್ಯ ವಿಭಾಗದವರು ಇದುವರೆಗೂ 50,000 ಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಆರೋಗ್ಯ ನಿರೀಕ್ಷಕರು, ಮಾರ್ಷಲ್‍ಗಳನ್ನು ನಿಯೋಜಿಸಿ ಮತ್ತು ನಿರಂತರ ತಪಾಸಣೆಯ ಮೂಲಕ ಇದುವರೆಗೂ 40 ಸಾವಿರಕ್ಕೂ ಹೆಚ್ಚು ಅಂಗಡಿ ಮತ್ತು ಸಂಸ್ಥೆಗಳಲ್ಲಿ ಕನ್ನಡ ಭಾಷಾ ಫಲಕ ಜಾರಿಗೊಳಿಸಲಾಗಿದೆ ಉಳಿದವರು ನಾಳೆಯೊಳಗೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರಿಗಳು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ ಹೊರಡಿಸಿದ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಮಟ್ಟದ ಅಧಿಕಾರಿಗಳಿಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಆದೇಶ ಪಾಲಿಸದ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಲಾಗಿದ್ದು, ನಿಯಮಗಳನ್ನು ಪಾಲಿಸಿದ ಕೆಆರ್ ಪುರಂನ ಹಿರಿಯ ಆರೋಗ್ಯ ನಿರೀಕ್ಷಕರನ್ನು ಬಿಬಿಎಂಪಿ ಅಮಾನತುಗೊಳಿಸಲಾಗಿದೆ. ಒಟ್ಟಾರೆ, ಮಾರ್ಚ್ ಒಂದರ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಇರಬೇಕು ಇಲ್ಲದಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

RELATED ARTICLES

Latest News