Thursday, May 2, 2024
Homeರಾಜ್ಯರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕುರಿತು ಸಿಎಂ ಸಭೆ

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕುರಿತು ಸಿಎಂ ಸಭೆ

ಬೆಂಗಳೂರು, ಅ.26- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಮಿತಿ ಉನ್ನತ ಮಟ್ಟದ ಸಭೆ ಇಂದು ಗೃಹ ಕಚೇರಿ ಕೃಷ್ಣದಲ್ಲಿಂದು ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ. ಜಿ.ಪರಮೇಶ್ವರ್, ಡಾ. ಹೆಚ್.ಸಿ.ಮಹದೇವಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ,

ಡಾ. ಎಚ್.ಎಲ್.ಪುಷ್ಪ, ಡಾ.ವೀರಣ್ಣ ದಂಡೆ, ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ.ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್, ಡಾ.ವಿಠಲ್ ಐ.ಬೆಣಗಿ ಕೃಷಿ, ಡಾ.ಸಣ್ಣರಾಮು, ವೆಂಕಟರಾಮಯ್ಯ, ಡಾ.ಎಂ.ಎಸ್.ಮೂರ್ತಿ, ಡಾ.ಗೀತಾ ಶಿವಮೊಗ್ಗ , ಡಾ.ಜಯದೇವಿ ಜಂಗಮ ಶೆಟ್ಟಿ , ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಫಯಾಜ್ ಖಾನ್, ಹೃಷಿಕೇಶ್ ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್.ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್ ಚಂದ್ರಗುಪ್ತ , ಜೆ.ಲೋಕೇಶ್ ಉಪಸ್ಥಿತರಿದ್ದರು.

“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ”

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣ ವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿ ಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಬಾರಿ 68ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 68 ಮಂದಿಗೆ ಪ್ರಶಸ್ತಿ ನೀಡಬೇಕಿತ್ತು. ಅದಕ್ಕೆ ಸಾಧಕರನ್ನು ಗುರುತಿಸಲು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪುರಷ್ಕøತರ ವಯೋಮಿತಿಯನ್ನು 60 ವರ್ಷಕ್ಕಿಂತ ಕಡಿಮೆ ಮಾಡುವ ಹಾಗೂ ನಗದು ಪುರಸ್ಕಾರವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸುವ ನಿರ್ಧಾರ ಪ್ರಕಟಿಸಿದ್ದರು.

ಕಾವಲುಗಾರನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

ಈ ಮೊದಲು ರಾಜಕೀಯ ಒತ್ತಡಕ್ಕೆ ಮಣಿದು ಮಿತಿ ಇಲ್ಲದಂತೆ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿತ್ತು. ಸಿದ್ದರಾಮಯ್ಯ ಅವರು ಮೊದಲ ಅವಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವರ್ಷಾಚರಣೆಗೆ ಅನುಗುಣವಾಗಿ ಪ್ರಶಸ್ತಿಗಳ ಸಂಖ್ಯೆಯನ್ನು ನಿಗದಿ ಮಾಡಿದರು. ಅಂದಿನಿಂದಲೂ ಪ್ರತಿವರ್ಷ ಒಂದೊಂದೆ ಪ್ರಶಸ್ತಿಯ ಸಂಖ್ಯೆ ಹೆಚ್ಚಾಗುತ್ತಿದೆ. ಕಲೆ, ಸಾಹಿತ್ಯ, ಜಾನಪದ, ವೈದ್ಯಕೀಯ, ಕ್ರೀಡೆ, ಸಾಮಾಜಿಕ ಸೇವೆ, ಪತ್ರಿಕೋದ್ಯಮ, ಉದ್ಯಮ, ಅನಿವಾಸಿ ಭಾರತೀಯರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣ್ಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.

RELATED ARTICLES

Latest News