ಯಾವುದೇ ಕ್ಷಣದಲ್ಲಿ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

Social Share

ಬೆಂಗಳೂರು,ಅ.30- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡುನುಡಿ, ವಿಜ್ಞಾನ, ಭಾಷೆ, ಸಾಹಿತ್ಯ, ಪತ್ರಿಕೋದ್ಯಮ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಯಾವುದೇ ಕ್ಷಣದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಗೆ ಸಹಿ ಹಾಕಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಸುನೀಲ್‍ಕುಮಾರ್ ಪಟ್ಟಿಯನ್ನು ಇಂದು ಸಂಜೆ ಇಲ್ಲವೇ ನಾಳೆ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿ ಅರ್ಹರಿಗೆ ಮಾತ್ರ ಹಾಗೂ ಅರ್ಜಿಯನ್ನೇ ಹಾಕದೇ ಇರುವವರೆಗೆ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಯಾವುದೇ ಒತ್ತಾಯ, ಲಾಬಿ, ಒತ್ತಡಕ್ಕೆ ಮಣಿಯದೆ ಪ್ರಶಸ್ತಿನು ಅಂತಿಮಗೊಳಿಸಲಾಗಿದೆ.

ಒಟ್ಟು ಈ ಬಾರಿ 28 ಸಾವಿರ ಅರ್ಜಿಗಳು ಬಂದಿದ್ದವು. ಈವೆಲ್ಲವನ್ನೂ ಪರಿಶೀಲನೆ ನಡೆಸಿ ನಿಯಮದಂತೆ ಆಯಾ ವರ್ಷ ಎಷ್ಟನೇ ರಾಜ್ಯೋತ್ಸವ ನಡೆಯುತ್ತದೆಯೋ ಅಷ್ಟೇ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಾರಿ 67ನೇ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಷ್ಟೇ ಸಂಖ್ಯೆಯ ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಲಾಖೆ ಸಚಿವರಾದ ನಂತರ ಹೊಸ ಹೊಸ ಯೋಜನೆಗಳನ್ನು ಜಾರಿ ಮಾಡುತ್ತಿರುವ ಸಚಿವ ಸುನೀಲ್‍ಕುಮಾರ್ ಅವರು ಈ ಬಾರಿಯು ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಹೊಸ ಸಂಪ್ರದಾಯವನ್ನು ಹುಟ್ಟು ಹಾಕಿದ್ದಾರೆ.

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್, ಕಣ್ಣೂರು ಶ್ರೀ ಅರೆಸ್ಟ್

ಸಾಮಾನ್ಯವಾಗಿ ಯಾರು ಪ್ರಶಸ್ತಿಗೆ ಅರ್ಜಿ ಹಾಕಿರುತ್ತಾರೋ ಅದನ್ನು ಪರಿಶೀಲಿಸಿ ಸಮಿತಿಯು ಆಯ್ಕೆಯನ್ನು ಅಂತಿಮಗೊಳಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿತ್ತು. ಈ ಬಾರಿ ಆನ್‍ಲೈನ್, ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಅರ್ಜಿ ಹಾಕಿದ್ದರು. ಇನ್ನು ಕೆಲವರು ಭೌತಿಕವಾಗಿಯೂ ಅರ್ಜಿ ಸಲ್ಲಿಸಿದ್ದರೆ ವಲಯ ಮತ್ತು ಕ್ಷೇತ್ರ ಸೇರಿ 28 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು.

2021-22ನೇ ಸಾಲಿನ ಪ್ರಶಸ್ತಿಗೆ ಅರ್ಹ ಮಹನೀಯರನ್ನು ಆಯ್ಕೆ ಮಾಡಲು ಇಲಾಖೆ ಆಯ್ಕೆ ಸಲಹಾ ಸಮಿತಿಯನ್ನು ರಚಿಸಿದ್ದು, ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 30ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಇಲಾಖೆ ನೇಮಕ ಮಾಡಿದ್ದ ಉಪ ಸಮಿತಿ, ಸಲಹಾ ಸಮಿತಿ ಅರ್ಜಿ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿಗೆ ನಾನಾ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಚೆಕ್ ಪಡೆದು ಪ್ರಭಾವಿ ಹುದ್ದೆ ನೀಡಿದ್ದ ಸಿದ್ದರಾಮಯ್ಯ : N.R.ರಮೇಶ್ ಆರೋಪ

1:3 (ಒಂದು ಪ್ರಶಸ್ತಿಗೆ ಮೂವರು ಅರ್ಜಿ)ಗಳನ್ನು ಸಚಿವರ ನೇತೃತ್ವದ ಸಭೆಯಲ್ಲಿ ಅಂತಿಮಗೊಳಿಸಿತ್ತು ಎಂದು ತಿಳಿದುಬಂದಿದೆ. ನ್ಯಾ. ನಾಗಮೋಹನ್ ದಾಸ್ ಸಮಿತಿ ನೀಡಿರುವ ಶಿಫಾರಸಿನ ಮಾನದಂಡಗಳಂತೆ ಪ್ರತಿ ಜಿಲ್ಲೆಗೂ ಒಂದು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ.

Articles You Might Like

Share This Article