ಬೆಂಗಳೂರು,ಅ.25- ಮತ್ತೆ ಈದ್ಗಾ ಮೈದಾನ ಬಳಕೆ ವಿವಾದ ಭುಗಿಲೇಳುವ ಸಾಧ್ಯತೆಗಳಿವೆ. ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಇಡೀ ರಾಜ್ಯದ ಗಮನ ಸೆಳೆದಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರ ಮತ್ತೆ ಮುನ್ನೇಲೆಗೆ ಬಂದಿದೆ.
ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ಆಚರಣೆಗೆ ಪರ-ವಿರೋಧ ಮುಗಿದ ಬಳಿಕ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಕೂಗು ಕೇಳಿಬರ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದಿದ್ದು, ಇದಕ್ಕೆ ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳು ಬೆಂಬಲ ಘೋಷಿಸಿವೆ. ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸಲು ಅವಕಾಶ ನೀಡುವಂತೆ ಒತ್ತಡ ಏರಿದೆ.
ಭೂಗತ ಪಾತಕಿ ರವಿಪೂಜಾರಿ ಸಹಚರ ಶಾರ್ಪ್ ಶೂಟರ್ ಮುನ್ನಾ ಅರೆಸ್ಟ್
ಹೀಗಾಗಿ ನವಂಬರ್ 1 ರಂದು ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಅವಕಾಶ ಕೋಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮನವಿ ಮಾಡಿಕೊಂಡಿದೆ. ಆದರೆ, ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದು, ಯಾವುದೇ ಕಾರಣಕ್ಕೂ ಅನುಮತಿ ಕೊಡಲ್ಲ ಅಂತ ಹೇಳಿಕೆ ನೀಡಿರುವುದು ವಿವಾದ ಭುಗಿಲೇಳಲು ಕಾರಣವಾಗಿದೆ.
ಈ ಕುರಿತಂತೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಖಜಾಂಚಿ ಯಶವಂತ್ ತಿಳಿಸಿದ್ದಾರೆ. ಒಂದು ವೇಳೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.