ಬೆಂಗಳೂರು, ಜೂ.20-ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿರುವ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ.ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ನೋಡಿಕೊಳ್ಳಬೇಕಾಗಿದೆ ಹಾಗಾಗಿ ಕಾಸಾಪದ ಮಹತ್ವದ ಜವಾಬ್ದಾರಿ ಹೊರಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ, ಅಧ್ಯಕ್ಷ ಮಹೇಶ್ ಜೋಷಿಯವರ ನಡೆಯನ್ನುವಿರೋಧಿಸಿ ಅವರು ರಾಜೀನಾಮೆ ನೀಡಿದ್ದಾರೆಂಬ ಮಾತುಗಳೂ ಕೂಡ ಕೇಳಿ ಬರುತ್ತಿವೆ.
ಕಳೆದ ಹಲವು ದಿನಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ಸಾಕಷ್ಟುಅಸಮಾಧಾನಗಳಿಗೆ ಕಾರಣವಾಗುತ್ತಿವೆ.ಬಹಿರಂಗವಾಗಿ ಕೆಲ ಜಿಲ್ಲಾ ಸಂಘಟನೆಗಳು ಹಾಗೂ ಸಾಹಿತಿಗಳು ಮತ್ತು ಕಸಾಪದ ಹಿತ ಚಿಂತಕರು, ಅಧ್ಯಕ್ಷರು ಸರ್ವಾಧಿಕಾರಿ ದೋರಣೆ ತಳೆದಿದ್ದಾರೆ ಕೂಡಲೇ ರಾಜೀನಾಮೆ ನೀಡಬೇಕೆಂದು ಹೇಳುತ್ತಿದ್ದಾರೆ.
ಇದರ ನಡುವೆ ಕಸಾಪದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮನಿ ನಾಗರಾಜ್ ಅವರು ರಾಜೀನಾಮೆ ನೀಡುತ್ತಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.ಇದರ ನಡುವೆ ಪದ್ಮನಿ ನಾಗರಾಜ್ ಅವರು ಯಾರ ಕರೆನೂ ಸ್ವೀಕರಿಸುತ್ತಿಲ್ಲ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ