ಬೆಂಗಳೂರು, ಜ.4- ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಹಾವೇರಿ-ಹುಬ್ಬಳ್ಳಿ ರಸ್ತೆಯ ಶ್ರೀ ಅಜ್ಜಯ್ಯ ದೇವಸ್ಥಾನದ ಎದುರು ವೇದಿಕೆ ಈಗಾಗಲೇ ಸಿದ್ದಗೊಂಡಿದ್ದು, ಅಂತಿಮ ಹಂತದಲ್ಲಿ ಸಿಂಗಾರ ಕಾರ್ಯ ನಡೆಯುತ್ತಿದೆ.
ಜ. 6ರಿಂದ 8ರವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದ್ದು, ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್ಗಳಿಂದ ರಾರಾಜಿಸುತ್ತಿದ್ದು, ಅಕ್ಷರ ಜಾತ್ರೆಗೆ ಲಕ್ಷಾಂತರ ಜನ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಎಲ್ಲರಿಗೂ ಆತಿಥ್ಯ ನೀಡಲು ಕನ್ನಡ ಮನಸ್ಸುಗಳಿಗೆ ಮುದ ನೀಡಲು ಕನ್ನಡ ಸಾಹಿತ್ಯ ಪರಿಷತ್ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಈ ಭಾರಿ ವಿಜೃಂಭಣೆಯಿಂದ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಯಾವುದಕ್ಕೂ ಕೊರತೆಯಾಗದಂತೆ ಅಚ್ಚುಕಟ್ಟಾಗಿ ಮೂರು ದಿನಗಳ ಕಾಲ ಸಾಹಿತ್ಯ ವೈಭವವನ್ನು ಮೆರೆಸಲು ಜಿಲ್ಲಾ ಕಸಾಪ ಕೂಡ ಸಂಕಲ್ಪ ತೊಟ್ಟಿದೆ.
ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಈಗಾಗಲೇ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಕಾರ್ಯ ನಡೆಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಇದರಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
9 ತಿಂಗಳ ಹಿಂದೆ ಯುವಕನ ಕೊಲೆ, ಚಾರ್ಮುಡಿ ಘಾಟ್ನಲ್ಲಿ ಶವಕ್ಕಾಗಿ ಹುಡುಕಾಟ
ಶುಕ್ರವಾರ ಬೆಳಗ್ಗೆ 7 ಗಂಟೆಗೆ ಹುತಾತ್ಮ ಮಹದೇವ ಮೈಲಾರ ಮಹಾದ್ವಾರ ನಿಜಶರಣ ಅಂಬಿಗರ ಚೌಡಯ್ಯ ಮಂಟಪದ ಸಮೀಪ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಅರಬೈಲ್ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜರೋಹಣ ಮಾಡಲಿದ್ದು, ನಾಡೋಜ ಡಾ. ಮಹೇಶ್ ಜೋಷಿ ಅವರು ಪರಿಷತ್ನ ಧ್ವಜಾರೋಹಣ ಮಾಡಲಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ಅವರು ನಾಡಧ್ವಜರೋಹಣ ಮಾಡಿ ಅಕ್ಷರ ಜಾತ್ರೆಗೆ ಅಕೃತ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 7.30ಕ್ಕೆ ಸಮ್ಮೇಳನಾಧ್ಯಕ್ಷ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರ ಭವ್ಯ ಮೆರವಣಿಗೆಯನ್ನು ನಗರ ಸಭೆ ಅಧ್ಯಕ್ಷ ಸಂಜೀವ ಕುಮಾರ ನೀಲರಗಿ ಉದ್ಘಾಟಿಸಲಿದ್ದಾರೆ.
ಮಾಜಿ ಸಚಿವ ಬಸವರಾಜ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದು, ಇದರಲ್ಲಿ ಜಿಲ್ಲಾಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಮೊಹಮ್ಮದ್ ರೋಷನ್, ಎಸ್ಪಿ ಹನುಮಂತರಾಯ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಬಸ್ ನಿಲ್ದಾಣ, ಆರ್ಟಿಒ ಕಚೇರಿ ಮಾರ್ಗವಾಗಿ ಸಮ್ಮೇಳನ ವೇದಿಕೆ ತಲುಪಲಿದೆ.
ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕುಡುಕ
ನಂತರ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಸಚಿವರುಗಳಾದ ಸುನೀಲ್ ಕುಮಾರ್, ಬಿಸಿ ಪಾಟೀಲ್, ಬಿಸಿ ನಾಗೇಶ್, ಸಂಸದ ಶಿವಕುಮಾರ ಉದಾಸಿ,ಶಾಸಕರುಗಳಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಶ್ರೀನಿವಾಸ ಮಾನೆ, ಪರಿಷತ್ ಸದಸ್ಯರಾದ ಸಂಕನೂರ, ಸಲೀಂ ಅಹಮದ್, ಆರ್. ಶಂಕರ್, ಪ್ರದೀಪ್ ಶೆಟ್ಟರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.
kannada sahitya sammelana, Haveri ,