ನವದೆಹಲಿ,ಜೂ.21- ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವುಗಳನ್ನು ಮರು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಎಂಟು ಅರ್ಜಿಗಳು ಸಲ್ಲಿಕೆಯಾಗಿವೆ.
ಮತಪತ್ರ ಬಳಸಿ ಚುನಾವಣೆ ನಡೆಸಬೇಕು ಎಂಬುದರ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಚುನಾವಣಾ ಲಿತಾಂಶದಲ್ಲಿ 2 ಮತ್ತು 3ನೇ ಸ್ಥಾನ ಗಳಿಸಿದ ಸೋತ ಅಭ್ಯರ್ಥಿಗಳು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇ.5 ಇವಿಎಂಗಳಲ್ಲಿನ ಚಿಪ್ಗಳ ಪರಿಶೀಲನೆಗಾಗಿ ಚುನಾವಣಾ ಆಯೋಗ ಅವಕಾಶ ಕಲ್ಪಿಸಿತ್ತು.
ಸುಪ್ರೀಂ ಕೋರ್ಟ್ನ ಈ ಅವಕಾಶದನ್ವಯ, ಮಹಾರಾಷ್ಟ್ರದ ಅಹಮದ್ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಯ್ ವಿಖೆ ಪಾಟೀಲ್ ಅವರು 40 ಮತಗಟ್ಟೆಗಳಲ್ಲಿನ ಇವಿಎಂಗಳನ್ನು ಪರಿಶೀಲಿಸುವಂತೆ ಕೋರಿದ್ದಾರೆ. ವೈಎಸ್ಆರ್ಸಿಪಿ ಮತ್ತು ಡಿಎಂಡಿಕೆ ಅಭ್ಯರ್ಥಿಗಳು ಸಹ ಪರಿಶೀಲನೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ವೈಎಸ್ಆರ್ಪಿ ಮತ್ತು ಬಿಜೆಡಿಯ ಅಭ್ಯರ್ಥಿಗಳು ಇವಿಎಂ ಪರಿಶೀಲನೆಗೆ ಅರ್ಜಿ ಹಾಕಿದ್ದಾರೆ.
ಚುನಾವಣಾ ಆಯೋಗವು ಹೇಳಿರುವಂತೆ ಚುನಾವಣೆಯಲ್ಲಿ ಎರಡು ಅಥವಾ ಮೂರನೇ ಸ್ಥಾನದಲ್ಲಿರುವ ಪರಾಜಿತ ಅಭ್ಯರ್ಥಿಗಳು ಇವಿಎಂ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರತೀ ಇವಿಎಂಗೆ 1,47,200 ರೂಪಾಯಿ ಪಾವತಿಸಿ ಪರಿಶೀಲನೆಗೆ ಮನವಿ ಮಾಡಬಹುದಾಗಿದೆ.