ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ : ವಿದ್ಯಾರ್ಥಿಗಳಿಗೆ ಆಲ್‍ದಿ ಬೆಸ್ಟ್

Social Share

ಬೆಂಗಳೂರು,ಮಾ.8- ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ-2023 ವಾರ್ಷಿಕ ಪರೀಕ್ಷೆ ನಾಳೆಯಿಂದ ರಾಜ್ಯಾದ್ಯಂತ ಆರಂಭವಾಗಲಿದೆ.

ಪರೀಕ್ಷೆ ನಡೆಯಲಿರುವ ರಾಜ್ಯದ 1109 ಪರೀಕ್ಷಾ ಕ್ಷೆಂದ್ರಗಳಲ್ಲಿ ಸಿದ್ಧತೆ ಮಾಡಿಕೊಂಡಿದ್ದು, 7,26,224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸದಾಗಿ 6,29,791 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 3,25,053 ವಿದ್ಯಾರ್ಥಿನಿಯರು, 3,47,038 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅಲ್ಲದೆ, 25,847 ಖಾಸಗಿ ಮತ್ತು 70,586 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ 1109 ಪರೀಕ್ಷಾ ಕೇಂದ್ರಗಳನ್ನು ತೆರೆಯ ಲಾಗಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳ ಲಾಗಿದೆ.
ನಾಳೆಯಿಂದ ಮಾ.29ರ ವರೆಗೂ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ 65 ಕೇಂದ್ರಗಳನ್ನು ತೆರೆಯಲಾಗುತ್ತದೆ.

ಪರಿಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಜತೆಗೆ ಪೊಲೀಸ್ ಬಂದೋಬಸ್ತ್‍ಗೂ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಬಿರುಸುಗೊಂಡ ಪಕ್ಷಾಂತರ ಪರ್ವ : ನೆಲೆ ಕಂಡುಕೊಳ್ಳಲು ಆಕಾಂಕ್ಷಿಗಳ ಪರದಾಟ

ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಗೇಮ್ಸ್ ಕೇಂದ್ರಗಳ ಮೇಲೂ ವಿಶೇಷ ನಿಗಾ ಇಡಲಾಗುತ್ತದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆಯುವುದು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಮೊಬೈಲ್ ಫೋನ್, ಸ್ಮಾರ್ಟ್ ವಾರ್ಚ್, ಹಿಯರ್‍ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿರುತ್ತದೆ.

ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ ಮತ್ತು ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. ಮೌಲ್ಯಮಾಪನ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ನಿಗಾ ವಹಿಸಲಾಗುತ್ತದೆ. ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗುವ ಅಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಸಲಾಗಿದೆ.

ಭಾರತದಲ್ಲಿ ಹೋಳಿ ಹಬ್ಬ ಆಚರಿಸಿದ ಅಮೆರಿಕದ ಉನ್ನತಾಧಿಕಾರಿ

ಈ ಬಾರಿ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಅಂಕದ 20 ಪ್ರಶ್ನೆಗಳು ಇರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಅತಂಕ ಪಡದೆ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದೆ.

ಈ ಬಾರಿಯೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ನಿರ್ದೇಶನ ನೀಡಲಾಗಿದೆ.

Karnataka, 2nd, PUC, 2023, Exam,

Articles You Might Like

Share This Article