ಕರ್ನಾಟಕ-ಆಂಧ್ರಪ್ರದೇಶ ರಾಜ್ಯಗಳ ನಡುವೆ ಅಂತರರಾಜ್ಯ ಸಾರಿಗೆ ಒಪ್ಪಂದ

Social Share

ಬೆಂಗಳೂರು, ಫೆ.3-ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವೆ ಇದುವರೆಗೆ ಒಂದು ಪ್ರಧಾನ ಅಂತರರಾಜ್ಯ ಸಾರಿಗೆ ಒಪ್ಪಂದ ಹಾಗೂ 8 ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಗಳಾಗಿವೆ. ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಈ ಹಿಂದಿನ ಅಂತರರಾಜ್ಯ ಸಾರಿಗೆ ಒಪ್ಪಂದವನ್ನು 2008ರಲ್ಲಿ ಮಾಡಿಕೊಳ್ಳಲಾಗಿತ್ತು.

ಎರಡೂ ರಾಜ್ಯಗಳ ನಡುವೆ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ನಿನ್ನೆ ವಿಜಯವಾಡದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ .ಅನ್ಬುಕುಮಾರ್ ಹಾಗೂ ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿ.ಹೆಚ್. ಡಿ. ತಿರುಮಲ ರಾವ್ ಅವರು ಈ ಬಗ್ಗೆ ಚರ್ಚಿಸಿ ಕರ್ನಾಟಕ ಹಾಗೂ ಆಂಧ್ರ ಪ್ರದೇಶ ಸರ್ಕಾರಗಳು ಮಾಡಿಕೊಳ್ಳಬೇಕಾದ ಪ್ರಸ್ತಾಪಿತ 9ನೇ ಪೂರಕ ಅಂತರರಾಜ್ಯ ಸಾರಿಗೆ ಒಪ್ಪಂದಕ್ಕೆ ರಾಜ್ಯ ಸಾರಿಗೆ ಸಂಸ್ಥೆಗಳ ಮಾರ್ಗಗಳನ್ನು ಅಂತಿಮಗೊಳಿಸಿ ಸಹಿ ಮಾಡಿದ್ದಾರೆ.

ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

ಎರಡೂ ರಾಜ್ಯಗಳ ಸರ್ಕಾರಗಳು ಒಪ್ಪಂದ ಮಾಡಿಕೊಂಡಿದ್ದು, ಉಭಯ ರಾಜ್ಯಗಳಲ್ಲಿನ ಮಾರ್ಗಗಳಲ್ಲಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಬಹುದಾಗಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

ಎರಡು ರಾಜ್ಯಗಳ ರಸ್ತೆ ಸಾರಿಗೆ ಒಪ್ಪಂದದ ಅನ್ವಯ ಪ್ರತಿನಿತ್ಯ ಹೆಚ್ಚುವರಿ ಬಸ್ಸುಗಳನ್ನು ಎರಡು ರಾಜ್ಯಗಳಲ್ಲಿ ಕಾರ್ಯಾಚರಣೆ ಮಾಡಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು 69372 ಕಿ.ಮೀ.,
ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು 69284 ಕಿ.ಮೀ. ಗಳನ್ನು ಕಾರ್ಯಚರಿಸಲಿವೆ.

ಖ್ಯಾತ ಹಿರಿಯ ನಟ ಕಾಸಿನಾಧುನಿ ವಿಶ್ವನಾಥ್ ಇನ್ನಿಲ್ಲ

ಈ ಸಭೆಯಲ್ಲಿ ಕರಾರಸಾ ನಿಗಮದ ನಿರ್ದೇಶಕರು (ಸಿ ಮತ್ತು ಜಾ), ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಕರಾರಸಾ ನಿಗಮ ಹಾಗೂ ಎಪಿಎಸ್ ಆರ್ ಟಿ ಸಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka, Andhra, Interstate, Transport, Agreement,

Articles You Might Like

Share This Article