ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

Social Share

ಬೆಂಗಳೂರು,ಅ.23- ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮನಿ ( 56) ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ರತ್ನಾ ಆನಂದ, ಪುತ್ರ, ಪುತ್ರಿ ಸೇರಿದಂತೆ ಆಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಸಕಲ ಸರ್ಕಾರಿ ಗೌರವಧಾರಗಳೊಂದಿಗೆ ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಒಂದು ತಿಂಗಳಿನಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಮನಿ ಅವರು ಮಧ್ಯರಾತ್ರಿ 12.45ಕ್ಕೆ ಕೊನೆಯುಸಿರೆಳೆದರು.

PayCM ಅಭಿಯಾನ : ಕಾಂಗ್ರೆಸ್ ಕಾರ್ಯಕರ್ತರಿಗೆ ನೊಟೀಸ್

ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಅಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದು,ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.

ಆನಂದ ಮಾಮನಿ ಸಹ ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದಿಂದಲೇ ಬಂದಿದ್ದರು. ಅವರ ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ ಅವರು ವಿಧಾನಸಭೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಆನಂದ ಮಾಮನಿ ಸತತವಾಗಿ ಮೂರು ಶಾಸಕರಾಗಿ ಆಯ್ಕೆಯಾಗಿದ್ದರು.

ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮಿನಿ ಅವರು ಅನೇಕ ಸಮಾಜ ಸೇವೆಯಲ್ಲೂ ರುತಿಸಿಕೊಂಡಿದ್ದರು. 2000ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶ್ವರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‍ನ ಅಧ್ಯಕ್ಷರಾಗಿದ್ದರು.

2000ರಿಂದ 2002ರವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌದತ್ತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

2015ರಂದು ಡಿಸಿಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾಗಿ 23-03-2020ರಲ್ಲಿ ಕರ್ನಾಟಕ ವಿಧಾನಸಭೆಯ ಉಪಾಧ್ಯಕ್ಷರಾಗಿ ಮತ್ತೊಮ್ಮೆ 07-09-2020ರಂದು ರೇಣುಕಾ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಎರಡನೇ ಬಾರಿಗೆ 06-11-2020ರಿಂದ ಡಿಸಿಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಈ ಅವಯಲ್ಲಿ ಮತ್ತೊಮ್ಮೆ 2008 ರಿಂದ 2013ವರೆಗೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದರು.

2013-2018ರಲ್ಲಿ 2ನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ರ್ಪಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಸಿದರು. ಪ್ರಸ್ತುತ ವಿಧಾನಸಭಾ ಉಪಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಆನಂದ ಮಾಮನಿ ಕೃಷಿಯಲ್ಲಿ ಆಸಕ್ತಿ ಹೊಂದಿದ್ದು, ರಾಜಕೀಯಕ್ಕೆ ಬರುವ ಮುನ್ನ ಕೃಷಿ ಮಾಡುತ್ತಿದ್ದರು. 1984 ರಿಂದ 1999 ರವರೆಗೆ ಹತ್ತಿ ವ್ಯಾಪಾರ ಮಾಡುತ್ತಿದ್ದರು.

ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ಸೆಪ್ಟೆಂಬರ್‍ನಲ್ಲಿ ನಿಧನರಾಗಿದ್ದರು. ಅಕ್ಟೋಬರ್‍ನಲ್ಲಿ ಆನಂದ್ ಮಾಮನಿ ನಿಧನರಾಗಿದ್ದು, ಕಳೆದ ಎರಡು ತಿಂಗಳ ಅವಯಲ್ಲೇ ಬೆಳಗಾವಿ ಜಿಲ್ಲೆ ಇಬ್ಬರು ರಾಜಕೀಯ ನಾಯಕರನ್ನು ಕಳೆದುಕೊಂಡಂತಾಗಿದೆ.

ಸಂತಾಪ: ಉಪಸಭಾಧ್ಯಕ್ಷ ಆನಂದ್ ಮಾಮಿನಿ ಅವರ ನಿಧನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಮಾಧುಸ್ವಾಮಿ, ಮುರುಗೇಶ್ ನಿರಾಣಿ, ಶ್ರೀರಾಮುಲು, ಅಶ್ವಥ್‍ನಾರಾಯಣ, ಗೋಪಾಲಯ್ಯ, ಎಸ್.ಟಿ.ಚಂದ್ರಶೇಖರ್, ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಗುಣಗಾನ ಮಾಡಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದ್ದು, ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಕೋರಿದ್ದಾರೆ.

Articles You Might Like

Share This Article