ಬೆಂಗಳೂರು,ಡಿ.7- ಗುಜರಾತ್ ಮತ್ತು ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿರುವ ರಾಜ್ಯ ಬಿಜೆಪಿ ನಾಯಕರು ಪ್ರದೇಶವಾರಿನಂತೆ ಘಟಾನುಘಟಿ ನಾಯಕರನ್ನು ಕರ್ನಾಟಕಕ್ಕೆ ಆಹ್ವಾನಿಸಲು ಮುಂದಾಗಿದ್ದಾರೆ.
ಅಭಿವೃದ್ಧಿ ಮತ್ತು ಹಿಂದುತ್ವವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಭಿನ್ನವಾದ ಪ್ರಚಾರ ತಂತ್ರವನ್ನು ಹೆಣೆದಿದೆ.
ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿ ಅಜೆಂಡಾ ಪ್ರಸ್ತಾಪವಾದರೆ ಹಿಂದೂ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂದೂತ್ವ ಅಸ್ತ್ರವನ್ನು ಬಳಸಲಿ ದ್ದಾರೆ. ಯಾವ ನಾಯಕರು ಎಲ್ಲಿ, ಯಾವ ದಿನಾಂಕದಂದು ಪ್ರಚಾರ ನಡೆಸಬೇಕು ಎಂಬ ಬಗ್ಗೆ ಈಗಾಗಲೇ ಬಿಜೆಪಿಯ ಥಿಂಕ್ ಟ್ಯಾಂಕ್ ನೀಲನಕ್ಷೆಯನ್ನು ಸಿದ್ದಪಡಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಹಲವಾರು ಭೇಟಿ ಕೊಟ್ಟು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದರು. ಪರಿಣಾಮವು ಪಕ್ಷವು ಪೂರ್ಣ ಪ್ರಮಾಣವಾಗಿ ಅಧಿಕಾರ ಹಿಡಿಯಲು ಸಾಧ್ಯವಾಗದಿದ್ದರೂ 104 ಸ್ಥಾನಗಳನ್ನು ಗೆದ್ದಿತ್ತು.
ಇದೀಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲೂ ಯೋಗಿ ಆದಿತ್ಯನಾಥ ಅವರಿಗೆ ಭಾರೀ ಬೇಡಿಕೆ ಬಂದಿದ್ದರಿಂದ ಎರಡೂ ರಾಜ್ಯಗಳಿಗೆ ತೆರಳಿ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು. ಇದೀಗ ಕರ್ನಾಟಕಕ್ಕೂ ದಾಂಗುಡಿ ಇಡಲಿರುವ ಯೋಗಿ ಆದಿತ್ಯನಾಥ್, ಸುಮಾರು 10ರಿಂದ 12 ಜಿಲ್ಲೆಗಳಲ್ಲಿ ಹಿಂದುತ್ವ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ.
ಆರ್ಎಸ್ಎಸ್ನ ಪ್ರಯೋಗಶಾಲೆ ಎಂದೇ ಕರೆಯುವ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು, ಬಳ್ಳಾರಿ, ಬೆಳಗಾವಿ, ದಾವಣೆಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಹಿಂದುತ್ವವನ್ನೇ ಅಸ್ತ್ರವಾಗಿಟ್ಟುಕೊಂಡು ಪ್ರಚಾರ ನಡೆಸಬೇಕೆಂದು ಬಿಜೆಪಿ ಮನವಿ ಮಾಡಿದೆ.
ಮಹಾರಾಷ್ಟ್ರ – ಕರ್ನಾಟಕ ನಡುವೆ ಬಸ್ ಸೇವೆ ಬಂದ್
ಇನ್ನು ಪ್ರಧಾನಿ ನರೇಂದ್ರಮೋದಿಯವರು ಮುಂದಿನ ತಿಂಗಳಿನಿಂದ ರಾಜ್ಯಕ್ಕೆ ಪ್ರತಿ ತಿಂಗಳು ಎರಡೆರಡು ಬಾರಿ ಆಗಮಿಸಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಡುವರು.
ವಿಶೇಷವಾಗಿ ಹಳೇ ಮೈಸೂರು ಭಾಗದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.
ಒಂದು ಕಡೆ ಯೋಗಿ ಆದಿತ್ಯನಾಥ್, ಹಿಂದುತ್ವವನ್ನು ಬಳಸಿದರೆ ಮೋದಿ ಅಭಿವೃದ್ಧಿಯ ಅಜೆಂಡಾವನ್ನು ಜನತೆಯ ಮುಂದಿಡುವರು. ಉಳಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತಿತರರು ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಜಿಲ್ಲೆಗಳನ್ನು ಗುರಿಯಾಗಿಟ್ಟುಕೊಂಡು ಪ್ರಚಾರ ಮಾಡುವರು.
ದೆಹಲಿ ಪಾಲಿಕೆ ಗದ್ದುಗೆಗೆ ಬಿಜೆಪಿ-ಆಪ್ ನಡುವೆ ಪ್ರಬಲ ಪೈಪೋಟಿ
ಇದರ ಜೊತೆಗೆ ಬೂತ್ ಮಟ್ಟವನ್ನು ಬಲಪಡಿಸಲು ಮುಂದಾಗಿರುವ ಬಿಜೆಪಿ ಪೇಜ್ ಪ್ರಮುಖ್, ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ವಾಟ್ಸಪ್, ಇನ್ಸ್ಟ್ರಾಗ್ರಾಮ್ಗಳನ್ನು ಪರಿಣಾಮಕಾರಿ ಬಳಸಲು ವಿಶೇಷ ತಂಡವನ್ನು ರೂಪಿಸಿದೆ.
ಈ ಎಲ್ಲ ಪ್ರಕ್ರಿಯೆಗಳು ಈಗಾಗಲೇ ಸದ್ದಿಲ್ಲದೆ ಆರಂಭವಾಗಿದ್ದು, ಪ್ರತಿಯೊಬ್ಬರು ಭಿನ್ನಾಭಿಪ್ರಾಯಗಳನ್ನು ಮರೆತು ಚುನಾವಣೆಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಮಾತ್ರ ನಿರೀಕ್ಷಿತ ಗುರಿ ತಲುಪಲು ಸಾಧ್ಯ ಎಂದು ಸಂಘ ಪರಿವಾರದ ನಾಯಕರು ಸಲಹೆ ಮಾಡಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಸಾಕಷ್ಟು ವಿಭಿನ್ನ ಮತ್ತು ವಿನೂತನ ಶೈಲಿಯ ಪ್ರಚಾರಕ್ಕೆ ಆದ್ಯತೆ ಕೊಟ್ಟಿದೆ.
ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ
#Karnataka, #Assembly, #Elections, #BJPLeaders, #Invite, #YogiAdityanath, #PMModi, #AmitShah,