ನವದೆಹಲಿ,ಡಿ.12- ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ಇಂದು ದೆಹಲಿಯಲ್ಲಿ ರಾಜ್ಯ ನಾಯಕರ ಮಹತ್ವದ ಸಭೆ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಸೇರಿದಂತೆ ಬಹುತೇಕ ನಾಯಕರು ಸಭೆಯಲ್ಲಿ ಭಾಗವಹಿದ್ದರು.
ಸಭೆಯಲ್ಲಿ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಮುಂದಿಟ್ಟಿದೆ. ಅದರಲ್ಲಿ ಬಹುತೇಕ 120ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಏಕವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಉಳಿದಂತೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್‍ಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಕೆಲವು ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ನಿರೀಕ್ಷೆಯಿದೆ. ಸಂಭವನೀಯ ಪಟ್ಟಿಯಲ್ಲಿ ಕುಟುಂಬ ರಾಜಕಾರಣದ ಪ್ರಭಾವ ಯಥೇಚ್ಚವಾಗಿ ಕಾಣಿಸಿದೆ.
ರೆಪೋ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ಹಾನಿ: ಎಫ್‍ಕೆಸಿಸಿಐ
ಸುಮಾರು ಐದಾರು ಪ್ರಭಾವಿ ಕುಟುಂಬಗಳಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿಗೆ ಟಿಕೆಟ್‍ಗಾಗಿ ಶಿಫಾರಸ್ಸು ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಉದಯಪುರ ಘೋಷಣೆ ಕಡ್ಡಾಯವಾಗಿ ಜಾರಿಗೆ ತಂದು ಬಿಜೆಪಿಯ ಆರೋಪಗಳಿಗೆ ಬ್ರೇಕ್ ಹಾಕಲು ನಿರ್ಧರಿಸಿದೆ. ಅದರಂತೆ ಬಹುತೇಕ ಕುಟುಂಬ ರಾಜಕಾರಣದಲ್ಲಿ ಹೊಸ ಪೀಳಿಗೆಗೆ ಅವಕಾಶ ನಿರಾಕರಿಸುವ ಸಾಧ್ಯತೆಗಳಿವೆ.
ಮತ್ತೆ ಮುನ್ನಲೆಗೆ ಬಂದ ಸಂಪುಟ ವಿಸ್ತರಣೆ ಚರ್ಚೆ : 6 ಮಂದಿಗೆ ಕೋಕ್ ?
ಈಗಾಗಲೇ ಶಾಸಕರಾಗಿರುವವರು ಮತ್ತು ಪಕ್ಷ ಸಂಘಟನೆಯಲ್ಲಿ 5 ವರ್ಷಗಳಿಗಿಂತ ಹೆಚ್ಚು ಕೆಲಸ ಮಾಡಿರುವವರ ಹೆಸರನ್ನು ಪರಿಗಣಿಸುವ ಸಾಧ್ಯತೆಗಳಿವೆ. ಕುಟುಂಬ ರಾಜಕಾರಣ ತೀವ್ರವಾಗಿರುವ ಹಿನ್ನೆಲೆಯಲ್ಲಿ ಪಟ್ಟಿಯನ್ನು ಮತ್ತೊಮ್ಮೆ ಪರಿಷ್ಕರಣೆ ಮಾಡಿ ಕಳುಹಿಸುವಂತೆ ಹೈಕಮಾಂಡ್ ಸೂಚಿಸುವ ಸಾಧ್ಯತೆಗಳಿವೆ.
ಗಡಿ ವಿವಾದ: ಏಕಪಕ್ಷೀಯ ನಿರ್ಧಾರ ಬೇಡ ಕೇಂದ್ರಕ್ಕೆ ಸಂಸದರ ನಿಯೋಗ ಆಗ್ರಹ
ಒಟ್ಟಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ತಯಾರಿ ಆರಂಭಗೊಂಡಿದೆ. ಇಂದು ನಡೆಯುವ ಸಭೆ ಅತ್ಯಂತ ಮಹತ್ವದಾಗಿದೆ. ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಮರಳಿ ಅಧಿಕಾರಕ್ಕೆ ತರುವ ಸವಾಲು ಪಕ್ಷದ ಮೇಲಿದೆ. ಅಳೆದುತೂಗಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ.
Karnataka, assembly elections, Congress candidates, Delhi meeting,