ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ; ADGP ಪ್ರತಾಪ್‍ರೆಡ್ಡಿ

Social Share

ಬೆಂಗಳೂರು,ಫೆ.22- ಶಿವಮೊಗ್ಗದಲ್ಲಿ ಇಂದು ಮುಂಜಾನೆ ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಪ್ರತಾಪ್‍ರೆಡ್ಡಿ ತಿಳಿಸಿದರು. ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿರುವ ಅವರು, ಈ ಸಂಜೆ ಯೊಂದಿಗೆ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
ಒಂದು ಕಂಪೆನಿ ಆರ್‍ಎಎಫ್, ಕೆಎಸ್‍ಆರ್‍ಪಿ ತುಕಡಿಗಳು ಸೇರಿದಂತೆ ಬೆಂಗಳೂರು ನಗರ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸ್ ಅಕಾರಿಗಳು ಮತ್ತು ಸಿಬ್ಬಂದಿಗಳನ್ನು ಶಿವಮೊಗ್ಗದಲ್ಲಿ ಬಂದೋಬಸ್ತ್‍ಗೆ ನಿಯೋಜಿಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದರು. ಕಫ್ರ್ಯೂ ನಾಳೆ ಬೆಳಗ್ಗೆ 6 ಗಂಟೆವರೆಗೂ ಜಾರಿಯಲ್ಲಿರುತ್ತದೆ. ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಸಿದಂತೆ ಮೂವರನ್ನು ಬಂಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾದ  ಸ್ಥಳ ಮತ್ತು ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಸ್ಥಳಗಳಿಗೆ ಪೊಲೀಸ್ ಅಕಾರಿಗಳ ಜತೆ ಭೇಟಿ ನೀಡಿ ಪ್ರತಾಪ್ ರೆಡ್ಡಿ ಅವರು ಪರಿಶೀಲನೆ ನಡೆಸಿದರು.
ಆರೋಪಿಗಳ ಹಿನ್ನೆಲೆ ಬಗ್ಗೆ ಕೂಲಂಕಷ ತನಿಖೆ: ಬಂಧಿತ ಆರೋಪಿಗಳು ಅಪರಾಧ ಹಿನ್ನೆಲೆಯುಳ್ಳವರಾಗಿದ್ದು, ಇವರ ಸಂಪರ್ಕದಲ್ಲಿ ಯಾರ್ಯಾರು ಇದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪ್ರತಾಪ್‍ರೆಡ್ಡಿ ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳಿಗೆ ಯಾವ ಯಾವ ಸಂಘಟನೆಗಳ ಜತೆ ಸಂಪರ್ಕ ಇದೆಯೇ ಎಂಬುದರ ಬಗ್ಗೆಯೂ ಸಹ ಪರಿಶೀಲಿಸುತ್ತಿದ್ದೇವೆ. ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ನಿನ್ನೆ ನಡೆದ ಗಲಭೆಗೆ ಸಂಬಂಸಿದಂತೆ 9 ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

Articles You Might Like

Share This Article