ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆ ಹಾಳು : ಯು.ಟಿ.ಖಾದರ್ ಆಕ್ರೋಶ

Social Share

ಬೆಂಗಳೂರು, ಫೆ.20- ಕಾಂಗ್ರೆಸ್ ಸರ್ಕಾರ ಅಕಾರದಲ್ಲಿದ್ದಾಗ ಸೌಹಾರ್ದತೆಗೆ ಧಕ್ಕೆ ಬರುವ ಯಾವ ಘಟನೆಗಳು ನಡೆದಿರಲಿಲ್ಲ. ಬಿಜೆಪಿ ದುರುದ್ದೇಶದಿಂದ ಹಿಜಾಬ್ ವಿವಾದವನ್ನು ಸೃಷ್ಟಿಸಿ, ಮಾನಸಿಕ ಒತ್ತಡದ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತ ಪಡಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಅಸಮದಾನ ವ್ಯಕ್ತ ಪಡಿಸಿದರು.
ಹಿಜಾಬ್ ವಿವಾದದಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಂದರೆ ಮಾಡುತ್ತಿರುವುದಕ್ಕೆ ಪೆÇೀಷಕರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಕೂಡಲೇ ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಿಲ್ಲಿಸಿ ಶಾಲಾ-ಕಾಲೇಜುಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕು. ಆದರೆ ಸರ್ಕಾರದ ಅದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಈ ರೀತಿಯ ಗೊಂದಲಗಳಿಗೆ ಅವಕಾಶವೇ ಇರಲಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದಯುತ ವಾತಾವರಣ ನಿರ್ಮಿಸಿದ್ದೇವು. ಆದರೆ ಬಿಜೆಪಿ ತನ್ನ ರಾಜಕೀಯ ಕಾರಣಕ್ಕಾಗಿ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಜನರೇ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
ಸರ್ಕಾರವೇ ಸಮಸ್ಯೆ ಮೇಲೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆದೇಶದ ಮೂಲಕ ತಳಮಟ್ಟದಲ್ಲಿ ಗೊಂದಲ ಹುಟ್ಟಿಸಲಾಗಿದೆ. ರಾಜ್ಯದಲ್ಲಿ ಶಿಕ್ಷಕಿಯರಿಗೆ ನಿರ್ಬಂಧ ವಿಸಲಾಗುತ್ತಿದೆ. ಹಿಜಾಬ್ ಧರಿಸಿ ಪಾಠ ಮಾಡಲು ಶಿಕ್ಷಕರಿಯರಿಗೆ ಅವಕಾಶ ಇದೆ. ಆದರೂ ಅವರನ್ನು ತಡೆಯಲಾಗುತ್ತಿದೆ. ಪ್ರತಿ ವಿಷಯದಲ್ಲೂ ನ್ಯಾಯಾಲಯ ಸರ್ಕಾರಕ್ಕೆ ಬುದ್ದಿ ಹೇಳುವ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದು ನಮ್ಮ ಒತ್ತಾಯ. ರಾಷ್ಟ್ರಧ್ವಜಕ್ಕೆ ಅವರಿಂದ ಅಪಮಾನ ಆಗಿದೆ. ಸರ್ಕಾರ ನಮ್ಮ ಒತ್ತಡಕ್ಕೆ ಮಣಿಯದಿದ್ದರೂ, ವಿಷಯದ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡಾದರೂ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆಯನ್ನು ತಾರ್ಕಿಕ ಅಂತ್ಯ ಕಾಣುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Articles You Might Like

Share This Article