ಬೆಂಗಳೂರಲ್ಲಿ ಭುವನೇಶ್ವರಿ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಸ್ಥಾಪನೆ

Social Share

ಬೆಂಗಳೂರು, ಫೆ. 17- ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ಆಯವ್ಯ ಮಂಡಿಸಿದ ಅವರು, ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದರು.

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು. ಕರ್ನಾಟಕ ಜಗತ್ತಿನೆಲ್ಲೆಡೆ ಒಂದು ಶಕ್ತಿಯಾಗಿ ಹೊರ ಹೊಮ್ಮುತ್ತಿದ್ದು, ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಮ್ಮೆಯ ಕನ್ನಡಿಗರನ್ನು ಒಳಗೊಂಡ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.

ಬೊಮ್ಮಾಯಿ ಬಜೆಟ್‍ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು..?

ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ದೆಯ ಅವಿಭಾಜ್ಯ ಅಂಗವಾಗಿರುವ ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಒದಗಿಸಲಾಗುವುದು. ಆಡಳಿತದಲ್ಲಿ, ಕೈಗಾರಿಕೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡದ ವ್ಯಾಪಕ ಬಳಕೆಗಾಗಿ ಹಾಗೂ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅನಿಯಮವನ್ನು ಜÁರಿಗೆ ತರಲಾಗುವುದು ಎಂದು ಪ್ರಕಟಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಬದುಕು ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವರ ಜೀವನಗಾಥೆಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗುವುದು.

ನಾಡು ನುಡಿ ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 2 ಕೋಟಿ ರೂ. ನೆರವು ನೀಡಲಾಗುವುದು.ದೇಶವನ್ನು ಆಳಿದ ಗಂಗ, ಕದಂಬ, ರಾಷ್ಟ್ರಕೂಟ, ಚಾಲುಕ್ಯ ಹೊಯ್ಸಳ ಮತ್ತಿತರ ಕನ್ನಡದ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಅಧ್ಯಯನ ಮಾಡಲಾಗುವುದು ಎಂದರು.

ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಹಾಗೂ ಇಂದಿಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಸಕ್ರಿಯವಾಗಿರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ ನೆರವು ನೀಡಲಾಗುವುದು.

ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ.ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ, ಒಳಗೊಂಡಂತೆ ಬ್ಯಾಂಕ್ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

ಬದುಕುವ ದಾರಿ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1500 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು, ತರಬೇತಿಯನ್ನು ಶೂರ್ಣಗೊಳಿಸಿರುವವರಿಗೆ ಅಪ್ರೆಂಟಿಶಿಫ್1,500 ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು ಎಂದು ಘೋಷಿಸಿದರು.

ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ, ಉಚಿತ ಬಸ್ ಪಾಸ್

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ಯುವಸ್ನೇಹಿ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.

Karnataka, Bhuvaneshwari, statue,#BasavarajBommai,  #Budget2023, #StateBudget2023, #BommaiBudget, #ಬಜೆಟ್,  #ಬಜೆಟ್2023,

Articles You Might Like

Share This Article