ಬೆಂಗಳೂರು,ಡಿ.6- ಒಂದು ವೇಳೆ ಮತದಾನೋತ್ತರ ಸಮೀಕ್ಷೆಯಂತೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಭಾರೀ ಬಹುಮತದಿಂದ ಅಧಿಕಾರ ಗದ್ದುಗೆ ಉಳಿಸಿಕೊಂಡರೆ ಕರ್ನಾಟಕದಲ್ಲಿ ಮಹತ್ವದ ಬದಲಾವಣೆಯಾಗುವ ಸಂಭವವಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಅನುಸರಿಸಿದ ಮಾದರಿಯನ್ನೇ ಕರ್ನಾಟಕದಲ್ಲೂ ಅಳವಡಿಸಿಕೊಳ್ಳಲು ಬಿಜೆಪಿಯ ಥಿಂಕ್ಟ್ಯಾಂಕ್ ಮುಂದಾಗಿದೆ. ಪರಿಣಾಮ ಪಕ್ಷದೊಳಗೆ ಮಹತ್ವದ ಬದಾಲಾವಣೆಯಾಗಲಿದ್ದು, ಹಲವರಿಗೆ ನಡುಕ ಶುರುವಾಗಿದೆ. ಹಿಂದುತ್ವ-ಅಭಿವೃದ್ಧಿ ಅಂಜೆಂಡವೇ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿ ಹಾಗೂ ಹಿರಿಯರಿಗೆ ಕೋಕ್ ನೀಡುವ ಸಂಭವ ಹೆಚ್ಚಾಗಿದೆ.
ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಮತದಾನೋತ್ತರ ಸಮೀಕ್ಷೆ ಭವಿಷ್ಯ ನುಡಿದಿರುವುದರಿಂದ ಕೆಲವು ಸಚಿವರು ಮತ್ತು ಶಾಸಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಲಾಲೂಗೆ ಪುತ್ರಿಗೆ ಆದರ್ಶ ಪುತ್ರಿ ಎಂದು ಕೊಂಡಾಡಿದ ರಾಜಕೀಯ ವಿರೋಧಿಗಳು
ಗುಜರಾತ್ನಲ್ಲಿ ಮಾಜಿ ಮುಖ್ಯಮಂತ್ರಿ ವಿಜಯರೂಪಾನಿ ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಹಿಮಾಚಲ ಪ್ರದೇಶದಲ್ಲು ಇದೇ ರೀತಿ ಕೆಲವು ಶಾಸಕರಿಗೆ ಟಿಕೆಟ್ ಕೊಡದೆ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು.
ಕರ್ನಾಟಕದಲ್ಲೂ ಕೆಲವು ಶಾಸಕರು ಆಡಳಿತ ವಿರೋಧ ಅಲೆ ಎದುರಿಸುತ್ತಿದ್ದು, ಸುಮಾರು 25ರಿಂದ 30 ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. 5ರಿಂದ 6 ಬಾರಿ ಗೆದ್ದವರನ್ನು ಪಕ್ಷ ಸಂಘಟನೆಗೆ ನಿಯೋಜನೆ ಮಾಡಿಕೊಳ್ಳಲು ಚಿಂಥನ-ಮಂಥನ ಆರಂಭವಾಗಿದೆ.
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧ ವೈರಿಗಳು
ಎರಡನೇ ಹಂತದ ಮತ್ತು ಯುವ ಮುಖಗಳಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿ ಬರುತ್ತಿರುವುದರಿಂದ ಹಾಲಿ ಅನೇಕ ಸಚಿವರು, ಶಾಸಕರು ಗೇಟ್ಪಾಸ್ ಪಡೆಯುವ ಸಾಧ್ಯತೆ ಇದೆ.
ಪಕ್ಷದಲ್ಲೂ ಬದಲಾವಣೆ:
ಪಕ್ಷ ಸಂಘಟನೆಗೆ ಒತ್ತು ಕೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷರು, ಉಸ್ತುವಾರಿ, ಸಹ ಉಸ್ತುವಾರಿ, ಪ್ರಧಾನಕಾರ್ಯದರ್ಶಿಗಳು, ಕಾರ್ಯದರ್ಶಿ ಸೇರಿದಂತೆ ಪದಾಧಿಕಾರಿಗಳ ನೇಮಕಾತಿಯಲ್ಲೂ ಬದಲಾವಣೆ ಮಾಡಲಿದೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಹಾಲಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಬದಲಿಗೆ ಪ್ರಮುಖ ಸಮುದಾಯದ ಪ್ರಭಾವಿಗಳಿಗೆ ಮಣೆ ಹಾಕುವ ನಿರೀಕ್ಷೆ ಇದೆ. ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರ ಹೆಸರುಗಳು ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿವೆ.
ರಾಜಸ್ಥಾನ, ಛತ್ತಿಸ್ಗಡ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ
ಹಾಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬದಲಾಯಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರದಾನ್, ಪಿಯೂಸ್ ಗೋಯಲ್ ಅವರುಗಳನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿ-20 ಶೃಂಗ : ಪ್ರಧಾನಿ ಮೋದಿಗೆ ಸಲಹೆ ಕೊಟ್ಟ ದೇವೇಗೌಡರು
ಗುರುವಾರ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕೇಂದ್ರ ವರಿಷ್ಠರು ಕರ್ನಾಟಕದತ್ತ ಗಮನ ಹರಿಸಲಿದ್ದಾರೆ. ಜತೆಗೆ ಹಿಂದುತ್ವ ಮತ್ತು ಅಭಿವೃದ್ಧಿಯೇ ಚುನಾವಣ ಪ್ರಚಾರದ ವಸ್ತುವಾಗಲಿದೆ.
#Karnataka, #BJP, #leadership, #Change, #HighCommand,