Monday, July 8, 2024
Homeರಾಜಕೀಯಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ

ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ

ಬೆಂಗಳೂರು, ಮೇ 27- ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಮೂರು ಪಕ್ಷಗಳಲ್ಲೂ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದೆ. ಇದರ ನಡುವೆ ಬಿಜೆಪಿ ನಾಯಕರ ಕೈಗೆ ಚುನಾವಣೆಯ ಆಂತರಿಕ ಫಲಿತಾಂಶದ ವರದಿ ಸಿಕ್ಕಿದ್ದು, ಕಮಲ ಪಾಳಯದಲ್ಲಿ ಒಂದಿಷ್ಟು ಆತಂಕ ಎದ್ದು ಕಾಣುತ್ತಿದೆ.

28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಇಟ್ಟುಕೊಂಡಿದ್ದ ಕಮಲ-ದಳ ನಾಯಕರಿಗೆ ಆಂತರಿಕ ವರದಿ ಕೊಂಚ ನೆಮದಿ ಕೆಡುವಂತೆ ಮಾಡಿದೆ. ಅಂದರೆ, ಬಿಜೆಪಿಯೇ ರಾಜ್ಯದ ಬೂತ್‌ ಮಟ್ಟದ ಹಂತದಿಂದ ನಡೆಸಿರುವ ಆಂತರಿಕ ವರದಿಯನ್ನು ನೋಡಿದ ಮೇಲೆ ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದು ಅಸಾಧ್ಯ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಾಗಿದೆ.

ಬಿಜೆಪಿಯ ಬೂತ್‌, ಜಿಲ್ಲಾ, ತಾಲ್ಲೂಕು ಹಾಗೂ ಮುಖಂಡರ, ಕಾರ್ಯಕರ್ತರ ಅಭಿಪ್ರಾಯಗಳನ್ನು ಒಳಗೊಂಡಿರುವ ಆಂತರಿಕ ವರದಿಯೂ ಬಿಜೆಪಿ ನಾಯಕರಿಗೆ ಆಘಾತಕಾರಿ ಸುದ್ದಿ ಕೊಟ್ಟಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದ ಬಿಜೆಪಿಯೂ ಈ ಬಾರಿ ಹಲವು ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಬಿಜೆಪಿಯೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದರೂ ಟಾರ್ಗೆಟ್‌ ಹಾಕಿಕೊಂಡಿತ್ತು. ಆದರೆ, ಆಂತರಿಕ ವರದಿ ಬಿಜೆಪಿ ನಾಯಕರ ಕೈ ಸೇರಿದೆ.

ಲೋಕಸಭಾ ಚುನಾವಣೆಯಲ್ಲಿ ್ಲ ಜೆಡಿಎಸ್‌‍ ಜೊತೆಗಿನ ಮೈತ್ರಿ ಸಕ್ಸಸ್‌‍ ಆಗಿದ್ದರೂ ಕೂಡ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಎಡವುವ ಸಾಧ್ಯತೆ ಇದೆ ಎಂದು ಆಂತರಿಕ ವರದಿ ಹೇಳಿದೆ ಎನ್ನಲಾಗುತ್ತಿದೆ.ಆಂತರಿಕ ವರದಿಯ ಪ್ರಕಾರ, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಕಮಲ ಪಡೆಯ ನಾಯಕರು ಇದ್ದಾರೆ. ಆದರೆ, ಅವರು ಅಂದುಕೊಂಡ ಗುರಿ ಮುಟ್ಟುವುದು ಇರಲಿ, ಕಳೆದ ಬಾರಿ ಪಡೆದ ಸ್ಥಾನಗಳನ್ನು ಪಡೆಯುವುದು ಅನುಮಾನ ಎಂದು ಹೇಳಲಾಗಿದೆ.

ತಮ್ಮ ಆಂತರಿಕ ವರದಿ ಪ್ರಕಾರ 17 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದು, ಐದು ಕ್ಷೇತ್ರಗಳಲ್ಲಿ 50 – 50 ಚಾನ್ಸ್ ಇದ್ದು, ಅಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌‍ ನಡುವೆ ಭಾರೀ ಪೈಪೋಟಿ ಇದೆ ಎನ್ನಲಾಗಿದೆ. 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ಆಂತರಿಕ ವರದಿ ಹೇಳಿದೆ.

ಬಿಜೆಪಿಯ ಇಂಟರ್ನಲ್‌ ರಿಪೋರ್ಟ್‌ ಪ್ರಕಾರ, ಹಳೇ ಮೈಸೂರು ಪ್ರಾಂತ್ಯದ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬಹುದು. ಅದೇ ರೀತಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಅಂದರೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಮಲೆನಾಡು ಹಾಗೂ ಕರಾವಳಿ ಭಾಗದ ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿಯೂ ಕಮಲ ಚಿಹ್ನೆಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸದಲ್ಲಿ ಕೇಸರಿ ನಾಯಕರು ಇದ್ದಾರೆ. ಇತ್ತ, ಮುಂಬೈ ಕರ್ನಾಟಕದ ಕಡೆ ಬಂದರೆ ಹುಬ್ಬಳ್ಳಿ – ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ ಎಂದು ಕಮಲ ಪಾಳಯದ ಆಂತರಿಕ ವರದಿ ಹೇಳಿದೆ. ಈ 17 ಕ್ಷೇತ್ರಗಳ ಪೈಕಿ ನಾಲ್ಕು 6 ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು.

ಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ ಹಾಗೂ ಬಳ್ಳಾರಿಯಲ್ಲಿ ಬಿಜೆಪಿಗೆ 50-50 ಚಾನ್ಸ್ ಇದೆ ಎಂದು ಕಮಲದ ಆಂತರಿಕ ವರದಿ ಹೇಳಿದೆ. ಆದರೆ, ಚಾಮರಾಜನಗರ, ಚಿಕ್ಕೋಡಿ, ಬೀದರ್‌, ರಾಯಚೂರು, ಕೊಪ್ಪಳ, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲುವ ಆತಂಕ ಇದೆ ಎಂದು ಆಂತರಿಕ ವರದಿ ಹೇಳಿದೆ. ಜೆಡಿಎಸ್‌‍ ಸ್ಪರ್ಧಿಸಿದ ಮೂರು ಕ್ಷೇತ್ರಗಳಲ್ಲಿ ಎರಡನ್ನು ಗೆಲ್ಲಬಹುದು ಎಂದು ಹೇಳಲಾಗಿದ್ದು, ಒಂದು ಕ್ಷೇತ್ರದಲ್ಲಿ 50-50 ಚಾನ್‌್ಸ ಇದೆ ಎಂದು ಆಂತರಿಕ ವರದಿ ಹೇಳಿದೆ.

RELATED ARTICLES

Latest News