ಮಾ.1ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

Social Share

ಬೆಂಗಳೂರು,ಫೆ.25- ರಾಜ್ಯದಲ್ಲಿ ಮತ್ತೆ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕೆಂದು ದೃಢಸಂಕಲ್ಪ ಮಾಡಿರುವ ಬಿಜೆಪಿ ಮಾ.1ರಿಂದ ರಾಜ್ಯದ 224 ಕ್ಷೇತ್ರಗಳಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪ ರಥಯಾತ್ರೆ ಮೂಲಕ ಚುನಾವಣೆಗೆ ಅಧಿಕೃತ ರಣಕಹಳೆ ಮೊಳಗಿಸಲಿದೆ.

ಮಾ.1ರಿಂದ ಮಾ.22ರವರೆಗೆ ರಾಜ್ಯದ 224 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದಲ್ಲಿ ರಾಜ್ಯದ ಉದ್ದಗಲಕ್ಕೂ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ.

ರೋಡ್ ಶೋ, ಸಾರ್ವಜನಿಕ ಸಮಾರಂಭ, ಕಾರ್ಯಕರ್ತರೊಂದಿಗೆ ಸಂಭಾಷಣೆ, ಮುಖಾಮುಖಿ ಭೇಟಿ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ವಿಜಯ ಸಂಕಲ್ಪ ರಥಯಾತ್ರೆ ನಡೆಯಲಿದ್ದು, ಮಾ.25ರಂದು ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಯಲ್ಲಿ ಮಹಾಸಮಾವೇಶದೊಂದಿಗೆ ಮುಕ್ತಾಯವಾಗಲಿದೆ.

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ, ಬೆಚ್ಚಿಬಿದ್ದ ಭಟ್ಕಳ

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಲೋಕೋಪಯೋಗಿ ಸಚಿವ ಹಾಗೂ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕ ಸಿ.ಸಿ.ಪಾಟೀಲ್, ಒಟ್ಟು ನಾಲ್ಕು ತಂಡಗಳಿಂದ ಮಾ.1ರಿಂದ ಯಾತ್ರೆ ಆರಂಭವಾಗಲಿದೆ ಎಂದರು. ಫೆ.28ರಂದು ರಥಯಾತ್ರೆಗೆ ಬಿಜೆಪಿ ಕಚೇರಿಯಲ್ಲಿ ಪೂಜೆ ಮಾಡಿ ಕಳುಹಿಸಿಕೊಡಲಾಗುವುದು. 224 ವಿಧಾನಸಭಾ ಕ್ಷೇತ್ರ ಹಾಗೂ 8 ಸಾವಿರ ಕಿ.ಮೀ ಈ ರಥಯಾತ್ರೆ ಸಂಚರಿಸಲಿದ್ದು, 50ಕ್ಕೂ ಹೆಚ್ಚು ಬಿಜೆಪಿ ಪ್ರಭಾವಿ ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಮಾರ್ಚ್ 1ರಂದು ಮಲೆಮಹಾದೇಶ್ವರ ಬೆಟ್ಟ, ಹನೂರು ತಾಲ್ಲೂಕಿನಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ಸಂಗೊಳ್ಳಿ ರಾಯಣ್ಣ ಸ್ಮಾರಕ, ನಂದಗಢದಿಂದ ಯಾತ್ರೆಗೆ ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಸಿಗಲಿದೆ. ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮನ ಹುಟ್ಟೂರಾದ ಕಿತ್ತೂರಿಗೂ ಹೋಗಲಿದೆ.

ಮಾರ್ಚ್ 3ರಂದು ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿರುವ ಸ್ಥಳ, ಬಸವಕಲ್ಯಾಣ, ಬೀದರ್ ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚಾಲನೆ ನೀಡಲಿದ್ದೇವೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಪ್ರತಿಮೆ, ದೇವನಹಳ್ಳಿ, ಬೆಂಗಳೂರು. ಈ ಯಾತ್ರೆಗೂ ಕೇಂದ್ರಗೃಹ ಸಚಿವ ಅಮಿತ್ ಷಾ ಚಾಲನೆ ನೀಡಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಮೊದಲ ತಂಡದಲ್ಲಿ ಈಶ್ವರಪ್ಪ, ಸೋಮಣ್ಣ, ನಾರಯಣಗೌಡ, ಸುನೀಲ್ ಕುಮಾರ್, ಶ್ರೀನಿವಾಸ ಪ್ರಸಾದ್, ಎನ್ ಮಹೇಶ್ ಇರಲಿದ್ದಾರೆ. ಎರಡನೇ ತಂಡದಲ್ಲಿ ಗೋವಿಂದ ಕಾರಜೋಳ, ಲಕ್ಷಣ ಸವದಿ, ರಮೇಶ್ ಜÁರಕಿಹೊಳಿ, ಮುರುಗೇಶ್ ನಿರಾಣಿ ಇರುತ್ತಾರೆ. ಮೂರನೇ ತಂಡದಲ್ಲಿ ಜಗದೀಶ್ ಶೆಟ್ಟರ್ ನೇತೃತ್ವ ವಹಿಸಲಿದ್ದಾರೆ.
ನಾಲ್ಕನೇ ತಂಡ- ಆರ್ ಅಶೋಕ್, ಅಶ್ವಥ್ ನಾರಾಯಣ್ ಎಸ್ ಟಿ ಸೋಮಶೇಖರ್, ಮುನಿರತ್ನ , ಸುಧಾಕರ್ ಇರಲಿದ್ದಾರೆ.

ಮಾರ್ಚ್ 25ರಂದು ದಾವಣಗೆರೆಯಲ್ಲಿ ದೊಡ್ಡ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರಮೋದಿ ಈ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಿ.ಸಿ.ಪಾಟೀಲ್ ಹೇಳಿದರು.ಅಂದಾಜು 10 ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಈ ಯಾತ್ರೆಯು ವಿಜಯವನ್ನು ತಂದು ಕೊಡುವ ಯಾತ್ರೆ ಆಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಆಡಳಿತ ವಿರೋಧಿ ಅಲೆ : ಬಿಜೆಪಿ ಶಾಸಕರಿಗೂ ಟಿಕೆಟ್ ತಪ್ಪುವ ಭೀತಿ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದರು.

ಚುನಾವಣೆ ನಡೆಯೋದು ಮಿನಿಸ್ಟರ್ ಆಧಾರದ ಮೇಲೆ ನಡೆಯೋದಿಲ್ಲ. ಮಂಡ್ಯದಲ್ಲಿ ಈ ಬಾರಿ ಅತಿ ಹೆಚ್ಚು ಸ್ಥಾನ ಗೆದ್ದೆ ಗೆಲ್ಲುತ್ತೇವೆ. ಅಮಿತ್ ಶಾ ಬಂದಾಗ ಲಕ್ಷಾಂತರ ಜನರು ಸೇರಿದ್ದರು.

ಮಂಡ್ಯ ನಮಗೆ ಸವಾಲು ಅಲ್ಲ, ಅಲ್ಲಿ ಸವಾಲು ಇರೋದು ಕಾಂಗ್ರೆಸ್ ಗೆ ಅಲ್ಲಿ ನಮ್ಮ ನಾರಯಣಗೌಡ್ರು ಇದ್ದಾರೆ, ಅವರ ನೇತೃತ್ವದಲ್ಲಿ ಅಲ್ಲಿ ಗೆಲ್ಲುತ್ತೇವೆ ನಾರಯಣಗೌಡ್ರು ಜಿಲ್ಲಾ ಉಸ್ತುವಾರಿ ಬೇಡ ಅಂತೀದ್ದರಲ್ಲ ಎಂಬ ಪ್ರಶ್ನೆಗೆ, ಪಕ್ಷ ಹೇಳಿದ್ರೆ ಹೇಗೆ ಅವರೇ ಕೇಳಬೇಕು ಅಲ್ಲವೇ ಎಂದು ಮರುಪ್ರಶ್ನೆ ಹಾಕಿದರು.

ಕನ್ನಡಿಗ ಕೆ.ಎಲ್.ರಾಹುಲ್ ನೆರವಿಗೆ ಬಂದ ಗಂಭೀರ್

ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಜಿಲ್ಲಾ ಪ್ರಭಾರಿ ಮತ್ತು ಯಾತ್ರೆಯ ಸಹ ಸಂಚಾಲಕ ಸಚ್ಚಿದಾನಂದಮೂರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Karnataka, BJP, Vijaya Sankalpa Yatra, March 1,

Articles You Might Like

Share This Article