ರಾಜ್ಯದಲ್ಲಿ ಬಿಜೆಪಿ 140 ಸ್ಥಾನ ಗೆಲ್ಲಲಿದೆ : ಬಿಎಸ್‌ವೈ ಭವಿಷ್ಯ

Social Share

ಬೆಂಗಳೂರು,ಡಿ.8- ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಫಲಿತಾಂಶದಂತೆ ಕರ್ನಾಟಕದಲ್ಲೂ ಇಲ್ಲಿನ ಮತದಾರ ಬಿಜೆಪಿಯ ಕೈ ಹಿಡಿಯಲಿದ್ದಾನೆ. 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದರು. ನಮಗೆ ನಮ್ಮದೇ ಆದ ಶಕ್ತಿ ಇದೆ. ಕಾರ್ಯಕರ್ತರ ಪಡೆಯೂ ಇದೆ. ಗೆಲ್ಲಲೇಬೇಕಾದ ಶಕ್ತಿಯೂ ಇದೆ. ರಾಜ್ಯದ ಜನತೆ ಕಂಡಿತವಾಗಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳು ಜನರಿಗೆ ಮೇಲೆ ಪರಿಣಾಮ ಬೀರಲಿದೆ ಎಂಬುದಕ್ಕೆ ಗುಜರಾತ್ ಫಲಿತಾಂಶವೇ ಸಾಕ್ಷಿಯಾಗಿದೆ. ಮೋದಿಯವರ ಜನಪ್ರಿಯತೆ ಗೆಲುವಿನ ದಾಖಲೆ ಬರೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸೋಲಿಸಲು ಆಮ್‍ಆದ್ಮಿ ಪಕ್ಷಕ್ಕೆ ಬಿಜೆಪಿ ಫಂಡಿಂಗ್ ಮಾಡಿದೆ : ಸಿದ್ದರಾಮಯ್ಯ

ಹಿಮಾಚಲಯಪ್ರದೇಶದಲ್ಲಿ ಪ್ರತೀ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುತ್ತಿದೆ. ನಮಗೆ ಅಲ್ಲಿ ಏಕೆ ಹಿನ್ನಡೆಯಾಗಿದೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಹೊರಬರುತ್ತಿರುವ ಚುನಾವಣಾ ಫಲಿತಾಂಶಗಳು ಜಾತಿ ಮತ್ತು ಧರ್ಮ ಆಧಾರಿತ ಏಲ್ಲ ರಾಜಕೀಯ ಬುಡಮೇಲು ಮಾಡಿದೆ.

ಈ ಎರಡೂ ರಾಜ್ಯಗಳ ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಇದಕ್ಕಾಗಿ ನಾನು ಆ ರಾಜ್ಯಗಳ ಜನತೆಯನ್ನು ಹಾಗೂ ಮತದಾರರನ್ನು ಅಭಿನಂದಿಸುತ್ತೇನೆ.

ಹಿರಿಯರಿಗೆ ಮನವೊಲಿಸಿ ಕಿರಿಯರಿಗೆ ಅವಕಾಶ ನೀಡಲು ಮುಂದಾದ ಬಿಜೆಪಿ

ಈ ದೇಶದ ಅಭಿವೃದ್ಧಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂಬುದು ಇದರಿಂದ ಸಾಬೀತಾಗಿದೆ. ಗುಜರಾತ್ ಚುನಾವಣೆಯ ಫಲಿತಾಂಶವು ಒಂದು ಐತಿಹಾಸಿಕ ದಾಖಲೆ. ಆ ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದ ಖ್ಯಾತಿಯನ್ನು ಭಾರತೀಯ ಜನತಾ ಪಕ್ಷಕ್ಕೆ ಲಭಿಸಿದೆ ಎಂದರು.

ಯಾರೂ ಏನೇ ಮಾತನಾಡಿದರೂ, ರಾವಣ, ಭಸ್ಮಾಸುರ ಎಂಬೆಲ್ಲ ವಿಶ್ಲೇಷಣೆಗಳನ್ನು ಮಾಡಿದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವ್ಯಕ್ತಿತ್ವವನ್ನು ಹಾಳುಗೆಡವಬಹುದು ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿರುಗೇಟುನೀಡಿದರು.

ಗುಜರಾತ್ ಚುನಾವಣೆ ಮೇಲೆ ಪರಿಣಾಮ ಬೀರದ ಮೊರ್ಬಿ ಸೇತುವೆ ದುರಂತ

ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುವುದನ್ನು ಬಿಡಬೇಕು. ಪ್ರಧಾನಿಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲು ಸಲಹೆ ಅವರಿಗೆ ನೀಡುತ್ತೇನೆ ಎಂದರು.

Karnataka BJP, win, 140 seats, bs Yediyurappa,

Articles You Might Like

Share This Article