ನನಗೆ ನನ್ನದೇ ಆದ ಶಕ್ತಿ ಇದೆ : ಎಚ್ಚರಿಕೆ ಸಂದೇಶ ರವಾನಿಸಿದ ಬಿಎಸ್‌ವೈ

Social Share

ಬೆಂಗಳೂರು, ಡಿ.15- ರಾಜ್ಯದಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಾಕಷ್ಟು ಶ್ರಮ ಹಾಕಿದ್ದೇನೆ. ಯಾರು ಯಾರನ್ನೂ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಎಲ್ಲರಿಗೂ ಅವರದ್ದೇ ಆದ ಶಕ್ತಿ ಇದೆ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಪಕ್ಷದವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಕೊಪ್ಪಳಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ.ಪಕ್ಷವನ್ನು ಅಧಿಕಾರಕ್ಕೆ ತಂದವರು ಯಾರು ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮುಗಿಸಲು ಷಢ್ಯಂತ್ರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನೂ ಮುಗಿಸಲು ಆಗಲ್ಲ ಸ್ಪಷ್ಟಪಡಿಸಿದರು.

ಲಾರಿ ಹಗ್ಗಕ್ಕೆ ಸಿಲುಕಿ ಗಾಳಿಯಲ್ಲಿ ತೂರಿ ಬಿದ್ದ ಬೈಕ್ ಸವಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೊಪ್ಪಳಕ್ಕೆ ಬರುತ್ತಿದ್ದು, ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಯಾವುದೋ ಒಂದು ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೆ ಇರೋ ಸ್ಥಿತಿ ಇತ್ತು. ಆದರೆ ಇದೀಗ ಹೋಗಲೇಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೋಗುತ್ತಿದ್ದೇನೆ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷದ ಮುಖಂಡರ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಒಂದಾಗಿದ್ದೇವೆ, ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ. ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣವಿದೆ ಎಂದು ಹೇಳಿದರು.

ಭಾರತದ ನಡೆಗೆ ನಡುಗಿ ಬಿಲ ಸೇರಿಕೊಂಡ ಉಗ್ರರು

ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದ್ದಾರಲ್ಲದೆ, ನನ್ನನ್ನು ಪಕ್ಷ ನಿರ್ಲಕ್ಷ್ಯ ಮಾಡುತ್ತಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.

ಇಂಟರ್ನೆಟ್ ಬಳಸುವ ಹೆಣ್ಣು ಮಕ್ಕಳೇ ಹುಷಾರ್..!

ಪಕ್ಷದ ಎಲ್ಲಾ ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೇನೆ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ಅಂತ ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಯಾರೂ ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡುತ್ತೇನೆ. ಚಾಮರಾಜನಗರ ಕಾರ್ಯಕ್ರಮಕ್ಕೆ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗುವ ಸ್ಥಿತಿಯಲ್ಲಿರಲಿಲ್ಲ ಅದಕ್ಕೆ ಹೋಗಿರಲಿಲ್ಲ ಎಂದರು.

karnataka bjp, Yediyurappa, party, meeting,

Articles You Might Like

Share This Article