ಬೊಮ್ಮಾಯಿ ‘ಸ್ಮಾರ್ಟ್’ ಬಜೆಟ್‍ನಲ್ಲಿ ಡಿಜಿಟಲ್ ಸೇವೆಗೆ ಹೆಚ್ಚು ಒತ್ತು ಸಾಧ್ಯತೆ

Social Share

ಬೆಂಗಳೂರು,ಮಾ.1- ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ 2022- 2 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಗುಡ್ ಗೌವರ್ನಮೆಂಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತು ನೀಡಿದ್ದು, ಮಾ.4ಕ್ಕೆ ಮಂಡನೆಯಾಗಲಿರುವ ಆಯವ್ಯಯದಲ್ಲಿ ಡಿಜಿಟಲ್ ಸೇವೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಬೇಕಿದೆ. ಹೀಗಾಗಿ ಆಡಳಿತ ನೀತಿಗೆ ಶರವೇಗ ನೀಡಲು ಮತ್ತು ಸರ್ಕಾರಿ ಸೇವೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಬಜೆಟ್ ನಲ್ಲಿ ಡಿಜಿಟಲ್ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ.
ಒಂದಡೆ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ, ಅಕಾರಿಗಳ ಅಸಡ್ಡೆ, ನಿರ್ಲಕ್ಷತೆಯಿಂದ ಜನರಿಗೆ ತಲುಪಬೇಕಾದ ಸೇವೆ ಸಮಯಕ್ಕೆ ಸರಿಯಾಗಿ ತಲುಪುತ್ತಿಲ್ಲ. ಹೀಗಾಗಿ ಆಡಳಿತದ ಮೇಲೆ ನಕಾರಾತ್ಮಕವಾಗಿ ಪರಿಣಾಮ ಬೀರಿದೆ.
ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಆಗುತ್ತಿರುವ ವಿಳಂಬಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿಯವರು ಡಿಜಿಟಲ್ ಸೇವೆಗೆ ಆದ್ಯತೆ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ನೇರವಾಗಿ ಜನತೆ ಬಾಗಿಲಿಗೆ ತಲುಪಿಸಲು ಡಿಜಿಟಲ್‍ಗೆ ಒತ್ತು ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರಮೋದಿ ಅವರ ಕನಸು ಕೂಡ ಡಿಜಿಟಲ್ ಇಂಡಿಯಾ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಕರ್ನಾಟಕಕ್ಕೆ ಒತ್ತು ನೀಡಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.
ಚುನಾವಣೆ ಇರುವ ಹಿನ್ನೆಲೆಯಲ್ಲಿ ಪಾರದರ್ಶಕ ಆಡಳಿತದ ಜೊತೆಗೆ ಜನರ ಬಾಗಿಲಿಗೇ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು. ಗುಡ್ ಗವರ್ನಮೆಂಟ್ ಅಜೆಂಡಾ ಇಟ್ಟುಕೊಂಡು ಮುಂದಿನ ಚುನಾವಣೆ ಎದುರಿಸಲು ಪ್ಲಾನ್ ರೂಪಿಸಿದ್ದಾರೆ.ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂದಾಯ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಲವು ಸೇವೆಗಳನ್ನು ಅನ್‍ಲೈನ್ ಮೂಲಕ ಪರಿಚಯಿಸಲಾಗಿದೆ.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಜತೆಗೆ ಪಾರದರ್ಶಕ ಆಡಳಿತ ನೀಡಲು ಸಾಧ್ಯವಿರುವ ಡಿಜಿಟಲ್ ಸೇವೆಯನ್ನು ಸಮಗ್ರವಾಗಿ ಅನುಷ್ಠಾನಕ್ಕೆ ತರಲು ಬಜೆಟ್‍ನಲ್ಲಿ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Articles You Might Like

Share This Article